ಉಡುಪಿ: ಉಡುಪಿ ಜಿಲ್ಲೆಯಲ್ಲಿ 122 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-63, ಕುಂದಾಪುರ-32, ಕಾರ್ಕಳ-25, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 122 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 70284 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1329 ಸಕ್ರಿಯ ಪ್ರಕರಣಗಳಿವೆ.
ಓರ್ವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 434 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 16 ರಂದು 2953 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಇಲ್ಲಿಯವರೆಗೆ ಒಟ್ಟು 858778 ಮಾದರಿಗಳನ್ನು ಪರೀಕ್ಷಿಸಲಾಗಿದೆ.