ಉಡುಪಿ: ಉಡುಪಿ ಜಿಲ್ಲೆಯಲ್ಲಿ 161 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-83, ಕುಂದಾಪುರ-28, ಕಾರ್ಕಳ-49, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 127 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 70542 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1325 ಸಕ್ರಿಯ ಪ್ರಕರಣಗಳಿವೆ.
ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 438 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 18 ರಂದು 7075 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 871719 ಮಾದರಿಗಳನ್ನು ಪರೀಕ್ಷಿಸಲಾಗಿದೆ.