ಉಡುಪಿ: ಉಡುಪಿ ಜಿಲ್ಲೆಯಲ್ಲಿ 135 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-67, ಕುಂದಾಪುರ-35, ಕಾರ್ಕಳ-32, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 97 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 68418 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1238 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 417 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 1 ರಂದು 1249 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 787029 ಮಂದಿಯನ್ನು ಪರೀಕ್ಷಿಸಲಾಗಿದೆ.
ಕೆಲವು ಜನರ ನಿರ್ಲಕ್ಷ್ಯ ಕಾರಣ:
ಜಿಲ್ಲೆಯಲ್ಲಿ ದಿನೇ ದಿನೇ ಸಾಲು ಸಾಲು ಕಾರ್ಯಕ್ರಮಗಳು ನಡೆಯುತ್ತಿದ್ದು ಬಹುತೇಕ ಕಾರ್ಯಕ್ರಮಗಳಲ್ಲಿ ಕೊರೊನಾ ಮುಂಜಾಗ್ರತಾ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ನೆರೆಯ ಕೇರಳ ರಾಜ್ಯದಲ್ಲಿ ಸೋಂಕು ಉಲ್ಭಣಗೊಂಡ ಕಾರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ಹಾವಳಿ ತೀವ್ರಗೊಂಡಿದೆ.
ನಿರ್ಲಕ್ಷ್ಯಮಾಡಿದ್ದಲ್ಲಿ ಉಡುಪಿ ಜಿಲ್ಲೆಯಲ್ಲಿಯೂ ಸೋಂಕಿನ ಹರಡುವಿಕೆ ಮುಂದಿನ ದಿನಗಳಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.