ಉಡುಪಿ: ಉಡುಪಿ ಜಿಲ್ಲೆಯಲ್ಲಿ 132 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-83, ಕುಂದಾಪುರ-11, ಕಾರ್ಕಳ-38 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 86 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 70807 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1543 ಸಕ್ರಿಯ ಪ್ರಕರಣಗಳಿವೆ.
ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 440 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 21 ರಂದು 6603 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 892656 ಮಾದರಿಗಳನ್ನು ಪರೀಕ್ಷಿಸಲಾಗಿದೆ.