ಉಡುಪಿ: ಉಡುಪಿ ಜಿಲ್ಲೆಯಲ್ಲಿ 131 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-71, ಕುಂದಾಪುರ-17, ಕಾರ್ಕಳ-42, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 158 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 68938 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1371 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 426 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 6 ರಂದು 3917 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 810525 ಮಂದಿಯನ್ನು ಪರೀಕ್ಷಿಸಲಾಗಿದೆ.