ಉಡುಪಿ ಜಿಲ್ಲೆಯಲ್ಲಿ 146 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-68, ಕುಂದಾಪುರ-40, ಕಾರ್ಕಳ-36, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 130 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 65236 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 955 ಸಕ್ರಿಯ ಪ್ರಕರಣಗಳಿವೆ.
ಉಡುಪಿ ತಾಲೂಕಿನ 68 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 394 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 30 ರಂದು 2160 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 685396 ಮಂದಿಯನ್ನು ಪರೀಕ್ಷಿಸಲಾಗಿದೆ.