ಉಡುಪಿ: ಉಡುಪಿ ಜಿಲ್ಲೆಯಲ್ಲಿ 104 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-57, ಕುಂದಾಪುರ-11, ಕಾರ್ಕಳ-34, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 44 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 67307 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 846 ಸಕ್ರಿಯ ಪ್ರಕರಣಗಳಿವೆ.
ಕುಂದಾಪುರ ತಾಲೂಕಿನ 53 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 408 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲಾಯಿ 20 ರಂದು 4999 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 746725 ಮಂದಿಯನ್ನು ಪರೀಕ್ಷಿಸಲಾಗಿದೆ.