ಉಡುಪಿ: ಉಡುಪಿ ಜಿಲ್ಲೆಯಲ್ಲಿ 82 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-44, ಕುಂದಾಪುರ-11, ಕಾರ್ಕಳ-26, ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 94 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 67401 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 834 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 408 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲಾಯಿ 21 ರಂದು 4828 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 751553 ಮಂದಿಯನ್ನು ಪರೀಕ್ಷಿಸಲಾಗಿದೆ.