ಉಡುಪಿ ಜಿಲ್ಲೆಯಲ್ಲಿ 113 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-60, ಕುಂದಾಪುರ-34, ಕಾರ್ಕಳ-17, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 71 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 65748 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 878 ಸಕ್ರಿಯ ಪ್ರಕರಣಗಳಿವೆ.
ಉಡುಪಿ ತಾಲೂಕಿನ 81 ವರ್ಷದ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 398 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 5 ರಂದು 1458 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 697115 ಮಂದಿಯನ್ನು ಪರೀಕ್ಷಿಸಲಾಗಿದೆ.