ಉಡುಪಿ ಜಿಲ್ಲೆಯಲ್ಲಿ 100 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-34, ಕುಂದಾಪುರ-32, ಕಾರ್ಕಳ-31, ಹೊರ ಜಿಲ್ಲೆಯ ಮೂವರು ಸೋಂಕಿಗೆ ಒಳಗಾಗಿದ್ದಾರೆ. 75 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 65823 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 903 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 398 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜುಲೈ 6 ರಂದು 2590 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 699705 ಮಂದಿಯನ್ನು ಪರೀಕ್ಷಿಸಲಾಗಿದೆ.