ಉಡುಪಿ ಜಿಲ್ಲೆಯಲ್ಲಿ 223 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 105, ಕುಂದಾಪುರ-61, ಕಾರ್ಕಳ- 51 ಮತ್ತು ಹೊರ ಜಿಲ್ಲೆಯ 6 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 345 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 60695 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 3222 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 360 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಜೂನ್ 12 ರಂದು 6050 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 639153 ಮಂದಿಯನ್ನು ಪರೀಕ್ಷಿಸಲಾಗಿದೆ.