ಉಡುಪಿ: ಉತ್ತಮ ಆಡಳಿತ ದಿನಾಚರಣೆಯ ಅಂಗವಾಗಿ ಕರ್ನಾಟಕ ಸರ್ಕಾರದ ವತಿಯಿಂದ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದ ವಿವಿಧ ಕ್ಷೇತ್ರಗಳ ಪ್ರಶಸ್ತಿ ಪುರಸ್ಕಾರದಲ್ಲಿ ಉಡುಪಿ ಜಿಲ್ಲೆಯ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ – ಸಂಜೀವಿನಿಗೆ ಸಾಮಾಜಿಕ ಕ್ರೋಢೀಕರಣ (ಅರ್ಹ ಕುಟುಂಬಗಳನ್ನು ಸಂಜೀವಿನಿ ಯೋಜನೆಯಡಿ ತರುವಲ್ಲಿ) ಹಾಗೂ ಆಧಾರ್ ಜೋಡಣೆಯಲ್ಲಿ ಉತ್ತಮ ಸಾಧನೆ ಮಾಡಿರುವ ಜಿಲ್ಲೆ ಎಂದು ಪ್ರಥಮ ಸ್ಥಾನದಲ್ಲಿ ಗುರುತಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಉನ್ನತ ಶಿಕ್ಷಣ ಐ.ಟಿ ಬಿ.ಟಿ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಅಶ್ವತ್ಥನಾರಾಯಣ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವ ಕುಮಾರ್, ಎನ್.ಆರ್.ಎಲ್.ಎಂ ಅಭಿಯಾನ ನಿರ್ದೇಶಕರಾದ ಡಾ. ರಾಗಪ್ರಿಯಾ ಮತ್ತಿತರರು ಉಪಸ್ಥಿತರಿದ್ದರು.