Thursday, February 12, 2026
Thursday, February 12, 2026

ಕರ್ನಾಟಕ ಸರಕಾರ ಸಹಕಾರ ನೀಡಿದರೆ ಉಡುಪಿಯಲ್ಲಿ ವಿಮಾನ ನಿಲ್ದಾಣ: ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು

ಕರ್ನಾಟಕ ಸರಕಾರ ಸಹಕಾರ ನೀಡಿದರೆ ಉಡುಪಿಯಲ್ಲಿ ವಿಮಾನ ನಿಲ್ದಾಣ: ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು

Date:

ನವದೆಹಲಿ, ಫೆ.11: ಕರ್ನಾಟಕ ರಾಜ್ಯ ಸರ್ಕಾರ ಸೂಕ್ತ ನೆರವು ನೀಡಿದರೆ ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ, ಪಡುಬಿದ್ರೆ ಬಳಿಯ ಎರ್ಮಾಳಿನ ವಿಮಾನ ನಿಲ್ದಾಣ ಯೋಜನೆಯನ್ನು ಕೈಗೆತ್ತಿಕೊಳ್ಳಬಹುದಾಗಿದೆ ಎಂದು ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿಗೆ ಸ್ಪಂದಿಸಿ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕೋರಿಕೆಯ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ಎರ್ಮಾಳಿನಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಚಿವರು ಸಂಸದರಿಗೆ ಬರೆದ ಪತ್ರದಲ್ಲಿ ಉಡಾನ್ ಯೋಜನೆಯಾದ ವಿಮಾನ ನಿಲ್ದಾಣ ಅಭಿವೃದ್ಧಿ ಮತ್ತು ಸುಧಾರಣೆಗಾಗಿ ಕೇಂದ್ರದ ಸಹಕಾರ ನೀಡಲು ಸಮ್ಮತಿ ಇದ್ದು ಸೂಕ್ತವಾದ ಸ್ಥಳವನ್ನು ಗುರುತಿಸಿ, ಯೋಜನೆಯ ಕಾರ್ಯ ಸಾಧ್ಯತೆಯ ಅಧ್ಯಯನ ನಡೆಸಿ, ಕೇಂದ್ರ ಸರಕಾರಕ್ಕೆ ಪ್ರಸ್ತಾಪನೆ ಸಲ್ಲಿಸುವಂತೆ ಸಲಹೆ ನೀಡಿದ್ದಾರೆ.

ಭಾರತ ಸರಕಾರದ ಗ್ರೀನ್ ಫೀಲ್ಡ್ ನೀತಿಯಂತೆ ಕೇಂದ್ರ ಸರಕಾರ ನೆರವು ನೀಡಲಿದೆ ಎಂದು ಕೇಂದ್ರ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜೆಸಿಐ: ತರಬೇತಿ ಕಾರ್ಯಕ್ರಮ

ಉಡುಪಿ, ಫೆ.11: ಜೇಸಿಐ ವಲಯ 15 ಇದರ ವತಿಯಿಂದ ಜೇಸಿಐ ಉಡುಪಿ...

ಕೊಡಿಬೆಟ್ಟು: ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಕಾಪು, ಫೆ.11: ಕಾಪು ವಿಧಾನಸಭಾ ಕ್ಷೇತ್ರದ ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ...

ವಂದೇ ಮಾತರಂ ಕಡ್ಡಾಯ

ನವದೆಹಲಿ, ಫೆ.11: ರಾಷ್ಟ್ರೀಯ ಗೀತೆ ವಂದೇ ಮಾತರಂ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ...

ಅಮೆರಿಕ ಜೊತೆಗಿನ ಮಧ್ಯಂತರ ವ್ಯಾಪಾರ ಒಪ್ಪಂದ ಏಕಪಕ್ಷೀಯ: ರಾಹುಲ್ ಗಾಂಧಿ

ನವದೆಹಲಿ, ಫೆ.11: ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಮೂಲಕ ಸರ್ಕಾರವು "ಭಾರತ...
error: Content is protected !!