Friday, September 20, 2024
Friday, September 20, 2024

ಉಡುಪಿ ಜಿಲ್ಲೆಯ ಅನ್ ಲಾಕ್ ಮಾರ್ಗಸೂಚಿ ಪ್ರಕಟ

ಉಡುಪಿ ಜಿಲ್ಲೆಯ ಅನ್ ಲಾಕ್ ಮಾರ್ಗಸೂಚಿ ಪ್ರಕಟ

Date:

ಉಡುಪಿ ಜಿಲ್ಲೆಯ ಅನ್ ಲಾಕ್ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೋಮವಾರ ಆದೇಶ ಹೊರಡಿಸಿದ್ದಾರೆ. ಕೋವಿಡ್ – 19 ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಉಲ್ಲೇಖ(1)ರ ಸರ್ಕಾರದ ಆದೇಶ ಮತ್ತು ಸೇರ್ಪಡೆ ಆದೇಶಗಳನ್ನು ಯಥಾವತ್ತಾಗಿ ಹಾಗೂ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಉಲ್ಲೇಖ (2), ಆದೇಶವನ್ನು ದಿನಾಂಕ: 05.07.2021 ರ ಪೂರ್ವಹ್ನ 5.00 ಗಂಟೆಯವರೆಗೆ ಮುಂದುವರಿಸಲಾಗಿದೆ.

1. ಜಿಲ್ಲೆಯಾದ್ಯಂತ ಸಂಜೆ 7.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯ ವರೆಗೆ ಅನುಬಂಧ- A ರಲ್ಲಿನ ಮಾರ್ಗಸೂಚಿಗಳಂತೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ.

2. ಜಿಲ್ಲೆಯಾದ್ಯಾಂತ ಶುಕ್ರವಾರ ಸಂಜೆ 7.00 ಗಂಟೆಯಿಂದ ಸೋಮವಾರ ಬೆಳಿಗ್ಗೆ 5.00 ಗಂಟೆಯ ವರೆಗೆ ಅನುಬಂಧ – B ರಲ್ಲಿನ ಮಾರ್ಗಸೂಚಿಗಳನ್ವಯ ಕಟ್ಟುನಿಟ್ಟಿನ ವಾರಂತ್ಯದ ಕರ್ಪ್ಯೂ ಜಾರಿಯಲ್ಲಿರುತ್ತದೆ.

3. ಜಿಲ್ಲೆಯಲ್ಲಿ ಬಸ್ಸುಗಳ ಸಂಚಾರವನ್ನು ಆಸನ ಸಾಮರ್ಥ್ಯದ 50% ರೊಂದಿಗೆ ಕೋವಿಡ್‌ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ, ಬಸ್‌ಗಳಲ್ಲಿ ನಿಂತುಕೊಂಡು ಪ್ರಯಾಣ ಮಾಡಲು ನಿರ್ಭಂಧಿಸಲಾಗಿದೆ.

ಈ ಕೆಳಕಂಡ ಹೆಚ್ಚುವರಿ ಚಟುವಟಿಕೆಗಳನ್ನು ಅನುಮತಿಸಲಾಗಿದೆ.

1. ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು, ಎಲ್ಲಾ ಉತ್ಪಾದನಾ ಘಟಕಗಳು/ ಕೈಗಾರಿಕಾ ಸಂಸ್ಥೆಗಳು /ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮರ್ಥ್ಯದ 50% ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯಾಚರಿಸಲು ಅನುಮತಿಸಲಾಗಿದೆ.ಆದಾಗ್ಯೂ ಉಡುಪು(Garment) ತಯಾರಿಕೆಯಲ್ಲಿ ತೊಡಗಿರುವ ಘಟಕಗಳು/ ಕೈಗಾರಿಕಾ ಸಂಸ್ಥೆಗಳು / ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮರ್ಥ್ಯದ 30% ರಷ್ಟು ಸಿಬ್ಬಂದಿಗಳೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಕಾರ್ಯಚರಿಸಲು ಅನುಮತಿಸಲಾಗಿದೆ.

2. ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಎಲ್ಲ ಅಂಗಡಿಗಳಿಗೆ ( Essential /Non – Essential) ಪ್ರತಿ ದಿನ ಬೆಳಿಗ್ಗೆ 6 ರಿಂದ ಸಂಜೆ 5 ಗಂಟೆಯವರೆಗೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ತೆರೆಯಲು ಅನುಮತಿಸಲಾಗಿದೆ. ಆದರೆ ಹವಾನಿಯಂತ್ರಿತ ಅಂಗಡಿಗಳು , ವಾಣಿಜ್ಯ ಸಂಕೀರ್ಣ, ಮಾಲ್ ಗಳು ಕಾರ್ಯನಿರ್ವಹಿಸಲು ಅವಕಾಶವಿರುವುದಿಲ್ಲ. ಮನೆಯಿಂದ ಸಾರ್ವಜನಿಕರು ಹೊರ ಬರುವುದನ್ನು ಕಡಿಮೆ ಮಾಡಲು ಕೋವಿಡ್ ನಿರ್ವಹಣೆಗಾಗಿರುವ ರಾಷ್ಟೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಎಲ್ಲಾ ವಸ್ತುಗಳ 24*7 ಹೋಂ ಡೆಲಿವರಿ ಸೇವೆಗಳನ್ನು ಪ್ರೋತ್ಸಾಹಿಸಲಾಗುವುದು. (ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸಿದ್ದಲ್ಲಿ ಸದ್ರಿ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು ಮತ್ತು ಎಲ್ಲಾ ಅಂಗಡಿಗಳಲ್ಲಿ ಮಾಲಿಕರು /ಸಿಬ್ಬಂದಿ ಮತ್ತು ಗ್ರಾಹಕರು ಮಾಸ್ಕ್‌ ಧರಿಸುವದು ಕಡ್ಡಾಯ, ಸಾಮಾಜಿಕ ಅಂತರ ಕಾಪಾಡಲು ಮಾರ್ಕುಗಳನ್ನು ಹಾಕುವುದು ಕಡ್ಡಾಯವಾಗಿದೆ.ಯಾವುದೇ ಅಂಗಡಿಯಲ್ಲಿ ಜನ ಜಂಗುಳಿ ಇರತಕ್ಕದ್ದಲ್ಲ. ತಲ್ಲಪಿದಲ್ಲಿ ಅಂತಹ ಅಂಗಡಿಗಳ ಪರವಾನಿಗೆಯನ್ನು ಕೋವಿಡ್‌ಮುಗಿಯುವ ತನಕ ಅಮಾನತ್ತಿನಲ್ಲಿಡಲಾಗುವುದು)

3. ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಹೋಟೆಲ್‌, ರೆಸ್ಟೋರೆಂಟ್‌, ಬಾರ್ ಮತ್ತು ಕ್ಲಬ್ ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತುಕೊಂಡು ಆಹಾರ ಸೇವಿಸಲು ಬೆಳಿಗ್ಗೆ 6-00 ಗಂಟೆಯಿಂದ ಸಂಜೆ 5.00 ಗಂಟೆವರೆಗೆ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಆದರೆ ಪಬ್ ಗಳಿಗೆ ಅನುಮತಿ ಇರುವುದಿಲ್ಲ. ಶೇ 50 ಸಾಮರ್ಥ್ಯದೊಂದಿಗೆ ಲಾಡ್ಜ್‌ಗಳು ಮತ್ತು ರೆಸಾರ್ಟ್‌ಗಳಿಗೆ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಕಡ್ಡಾಯವಾಗಿ ಅನುಸರಿಸುವ ಷರತ್ತುಗಳೊಂದಿಗೆ ಅವಕಾಶ ನೀಡಲಾಗಿದೆ.(ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸಿದ್ದಲ್ಲಿ ಸದ್ರಿ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು)

4. ಚಲನಚಿತ್ರ/ ಟಿ. ವಿ ಧಾರವಾಹಿಗಳಿಗೆ ಸಂಬಂಧಿಸಿದಂತೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.

5. ಕಟ್ಟಡ ನಿರ್ಮಾಣ ಮತ್ತು ದುರಸ್ಥಿಗೆ ( Construction activities/ Civil repair ) ಅನುಮತಿಸಿದೆ.ಅದಕ್ಕೆ ಸಂಬಂಧಿಸಿದ ಸಾಮಗ್ರಿಗಳೊಂದಿಗೆ ವ್ಯವಹರಿಸುವ ಅಂಗಡಿಗಳು / ಸಂಸ್ಥೆಗಳಿಗೆ ಬೆಳಿಗ್ಗೆ 6-00 ಗಂಟೆಯಿಂದ ಸಂಜೆ 5-00 ಗಂಟೆಯವರೆಗೆ ಕೋವಿಡ್ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಅನುಮತಿಸಿದೆ.

6. ವಾಕಿಂಗ್ ಮತ್ತು ಜಾಗಿಂಗ್‌ಗಾಗಿ ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆಯವರೆಗೆ ಉದ್ಯಾನವನಗಳನ್ನು ಕೋವಿಡ್‌ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ತೆರೆಯಲು ಅನುಮತಿಸಿದೆ. ಆದರೆ ಯಾವುದೇ ಗುಂಪು ಚಟುವಟಿಕೆಗಳನ್ನು ಅನುಮತಿಸಲಾಗುವುದಿಲ್ಲ.

7. ಶೇ. 50 ಸಾಮರ್ಥ್ಯದೊಂದಿಗೆ ಕೋವಿಡ್‌ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಮತ್ತು ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಜಿಮ್‌ಗಳಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

8. ಗರಿಷ್ಠ 2 ಪ್ರಯಾಣಿಕರೊಂದಿಗೆ ಟ್ಯಾಕ್ಸಿಗಳು ಮತ್ತು ಆಟೋ ರಿಕ್ಷಾಗಳಿಗೆ ಸಂಚರಿಸಲು ಅನುಮತಿಸಿದೆ.

9. ಕೋವಿಡ್‌ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಮತ್ತು ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗಳಿಗೆ ಅನುಮತಿ ನೀಡಲಾಗಿದೆ.(ಒಳಾಂಗಣ ಕ್ರೀಡೆಗಳಿಗೆ ಅವಕಾಶ ಇರುವುದಿಲ್ಲ)

10. ಕೋವಿಡ್‌ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಅನುಸರಿಸುವ ಷರತ್ತುಗಳೊಂದಿಗೆ ಎಲ್ಲ ಸರ್ಕಾರಿ/ ಖಾಸಗಿ ಕಛೇರಿಗಳಿಗೆ ಸಿಬ್ಬಂದಿಯ ಶೇ. 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ. ಆದಾಗ್ಯೂ, ಅಗತ್ಯ ಮತ್ತು ತುರ್ತು ಸೇವೆಗಳೊಂದಿಗೆ ವ್ಯವಹರಿಸುವ ಕಚೇರಿಗಳಿಗೆ ಅವುಗಳ ಅಗತ್ಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಲು ಅನುಮತಿಸಿದೆ. ಸಾಧ್ಯವಾದಷ್ಟು ಮನೆಯಿಂದ ಕೆಲಸವನ್ನು ನಿರ್ವಹಿಸಲು ಪ್ರೋತ್ಸಾಹಿಸುವುದು.

11. ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಆರೋಗ್ಯ ವಲಯಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿಗಳಿಗೆ ಅನುಮತಿಸಲಾಗಿದೆ.

12. ಮದುವೆಗಳು: “ಈಗಾಗಲೇ ನಿಗದಿಯಾಗಿರುವ ಮದುವೆಯನ್ನು ಸರಳವಾಗಿ ಆಯಾ ಮನೆಗಳಲ್ಲಿ ಕುಟುಂಬದ ಸದಸ್ಯರು /ಸಂಬಂಧಿಕರು ಸೇರಿದಂತೆ 40 ಜನರನ್ನು ಒಳಗೊಂಡು ಈ ಕೆಳಗೆ ನಿಗದಿಪಡಿಸಿದ ಷರತ್ತಿಗೊಳಪಟ್ಟು ನಡೆಸಲು ಅನುಮತಿಸಲಾಗಿದೆ.

ವಿವಾಹಗಳನ್ನು ಆಯೋಜಿಸುವವರು ವಿವಾಹ ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು.

ಅರ್ಜಿಯ ಸ್ವೀಕೃತಿಯ ಮೇರೆಗೆ, ತಹಶೀಲ್ದಾರರು ಪ್ರತಿ ಮದುವೆ ಕಾರ್ಯಕ್ರಮಕ್ಕೆ 40 ಪಾಸ್‌ಗಳನ್ನು ನೀಡಬೇಕು.

ಪಾಸ್ ಹೊಂದಿರುವ ಜನರಿಗೆ ಮಾತ್ರ ಮದುವೆ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ ಮತ್ತು ಪಾಸ್ ಅನ್ನು ವರ್ಗಾಯಿಸಲು ಅವಕಾಶವಿರುವುದಿಲ್ಲ.

ಮದುವೆ ಕಾರ್ಯಕ್ಕೆ ಹಾಜರಾಗುವ ಜನರು ಕೋವಿಡ್‌ಸಮುಚಿತ ವರ್ತನೆಯನ್ನು (COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಅವರ ಪಾಸ್‌ಗಳನ್ನು ಅಧಿಕೃತ ಪರಿಶೀಲನಾ ಅಧಿಕಾರಿಗಳಿಗೆ ತೋರಿಸುವುದು.

13. ಶವಸಂಸ್ಕಾರ /ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ಕೋವಿಡ್‌ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ನಿರ್ವಹಿಸಲು ಅನುಮತಿಸಿದೆ.

ಮೇಲಿನ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, Disaster Management Act 2005 , Karnataka Epidemic Diseases act 2020 ಮತ್ತು IPC ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮಕೈಗೊಳ್ಳಲಾಗುವುದು. ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!