Monday, January 20, 2025
Monday, January 20, 2025

ವಿಶ್ವಕ್ಕೆ ಸಿರಿ ಧಾನ್ಯ ರಫ್ತು ಮಾಡುವ ಹಬ್ ಆಗಲಿದೆ ಭಾರತ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ವಿಶ್ವಕ್ಕೆ ಸಿರಿ ಧಾನ್ಯ ರಫ್ತು ಮಾಡುವ ಹಬ್ ಆಗಲಿದೆ ಭಾರತ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Date:

ಉಡುಪಿ: ಮುಂದಿನ 2 ವರ್ಷದ ಅವಧಿಯಲ್ಲಿ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಉತ್ಪಾದನೆ ಮಾಡುವುದರ ಜೊತೆಗೆ, ಉತ್ತಮ ಗುಣಮಟ್ಟದ, ನೈಸರ್ಗಿಕ ಅಂಶಗಳನ್ನು ಒಳಗೊಂಡ ಸಿರಿಧಾನ್ಯಗಳನ್ನು ವಿದೇಶಕ್ಕೆ ರಫ್ತು ಮಾಡುವುದರ ಮೂಲಕ, ಭಾರತವು ಇಡೀ ವಿಶ್ವಕ್ಕೆ ಸಿರಿಧಾನ್ಯಗಳನ್ನು ರಫ್ತು ಮಾಡುವ ಹಬ್ ಆಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಇಂದು ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದಲ್ಲಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಶಿವಮೊಗ್ಗ, ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ, ಅಂತಾರಾಷ್ಟ್ರ‍ೀಯ ಸಿರಿಧಾನ್ಯ ವರ್ಷ 2023 ಪೌಷ್ಠಿಕ ತೋಟ ಮತ್ತು ವೃಕ್ಷಾರೋಪಣ ಪ್ರಚಾರಾಂದೋಲನ ಕಾರ್ಯಕ್ರಮವನ್ನು, ಮಹಿಳೆಯರ ಮಡಿಲಿಗೆ ಸಿರಿಧಾನ್ಯಗಳನ್ನು ತುಂಬಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಭಾರತ ಮಳೆಯಾಧಾರಿತ ಕೃಷಿಯನ್ನು ಅವಲಂಬಿಸಿರುವ ರಾಷ್ಟ್ರವಾಗಿದ್ದು, ಇಲ್ಲಿನ ವಾತಾವರಣವು ಸಿರಿಧಾನ್ಯ ಕೃಷಿಗೆ ಸೂಕ್ತವಾಗಿದೆ. ಸಿರಿಧಾನ್ಯಗಳಲ್ಲಿ ರಾಸಾಯನಿಕ ಅಂಶಗಳು ಕಡಿಮೆಯಿದ್ದು, ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ, ಪ್ರೋಟಿನ್, ವಿಟಮಿನ್ ಅಂಶಗಳಿದ್ದು, ಮಧುಮೇಹ ನಿಯಂತ್ರಣ ಸೇರಿದಂತೆ ಹಲವು ಸಮಸ್ಯೆಗಳಿಗೆ ವೈದ್ಯರು ಶಿಫಾರಸ್ಸು ಮಾಡುತ್ತಿದ್ದಾರೆ. ಅಲ್ಲದೇ ದೇಹದಲ್ಲಿ ರೋಗ ನಿರೋಧಕ ಶಕ್ತಿ ಬೆಳವಣಿಗೆಗೆ ಪೂರಕವಾಗಿದೆ. ಭಾರತದ ಬೇಡಿಕೆಯಂತೆ ವಿಶ್ವಸಂಸ್ಥೆಯು 2023 ನೇ ವರ್ಷವನ್ನು ಅಂತಾರಾಷ್ಟ್ರ‍ೀಯ ಸಿರಿಧಾನ್ಯ ವರ್ಷವಾಗಿ ಘೋಷಿಸಿದ್ದು, ಈ ಅವಧಿಯಲ್ಲಿ ದೇಶದಲ್ಲಿ ರೈತರು ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಬೆಳೆದು, ಅಂತಾರಾಷ್ಟ್ರ‍ೀಯ ಮಾರುಕಟ್ಟೆಗೆ ರಫ್ತು ಮಾಡುವ ಮೂಲಕ ರೈತರು ಹೆಚ್ಚಿನ ಆದಾಯಗಳಿಸುವುದರ ಜೊತೆಗೆ, ದೇಶವು ಸಿರಿಧಾನ್ಯಗಳನ್ನು ರಫ್ತು ಮಾಡುವ ಹಬ್ ಆಗುವಂತಾಗಬೇಕು ಎಂದು ಸಚಿವರು ಹೇಳಿದರು.

ಒಂದು ಕಾಲದಲ್ಲಿ ಭಾರತ ಸಿರಿಧಾನ್ಯಗಳನ್ನು ಬೆಳೆಯುವ ಮತ್ತು ಉಪಯೋಗಿಸುವ ವಿಶ್ವದ ಪ್ರಮುಖ ದೇಶವಾಗಿದ್ದು, ಹರಪ್ಪ, ಮೆಹೆಂಜೋದಾರೋ ನಾಗರಿಕತೆಯ ಜನರು ಸಿರಿಧಾನ್ಯಗಳನ್ನು ಸೇವನೆ ಮಾಡುತ್ತಿದ್ದರು ಎಂದು ಸಂಶೋಧನೆಗಳಿಂದ ತಿಳಿದುಬಂದಿದೆ. ಕರ್ನಾಟಕದಲ್ಲಿ ಹಿಂದೆ 8 ಲಕ್ಷ ಹೆಕ್ಟರ್‌ನಲ್ಲಿ ಸಿರಿಧಾನ್ಯಗಳನ್ನು ಬೆಳೆಯುತ್ತಿದ್ದು, ಈಗ ಆ ಪ್ರಮಾಣ 3.5 ಲಕ್ಷ ಹೆಕ್ಟರ್‌ಗೆ ಇಳಿದಿದೆ. ದೇಶದಾದ್ಯಂತ ಮುಂದಿನ ಎರಡು ವರ್ಷಗಳಲ್ಲಿ ನಿರಂತರವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಿರಿಧಾನ್ಯಗಳ ಉತ್ಪಾದನೆ ಹೆಚ್ಚಿಸಲಾಗುವುದು, ರಾಯಭಾರಿ ಕಚೇರಿಗಳ ಮೂಲಕವೂ ಸಿರಿಧಾನ್ಯಗಳ ಬಳಕೆಯ ಮಹತ್ವ ಕುರಿತು ತಿಳಿಸುವ ಪ್ರಯತ್ನ ನಡೆಯಲಿದೆ ಎಂದರು.

ಜಿಲ್ಲೆಯಲ್ಲಿ ಕೃಷಿ ಕಾಲೇಜು ಆರಂಭಿಸುವ ಕುರಿತಂತೆ, ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ, ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನೂ ಮಾಡುವುದಾಗಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಇದೇ ಸಂದರ್ಭದಲ್ಲಿ ಸಿರಿಧಾನ್ಯಗಳಿಂದ ತಯಾರಿಸಿದ ವಿವಿಧ ಉತ್ಪನ್ನಗಳು ಮತ್ತು ಸಿರಿಧಾನ್ಯಗಳ ಕುರಿತ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದ ಸಚಿವರು, ಪೌಷ್ಠಿಕತೋಟ ಮತ್ತು ವೃಕ್ಷಾರೋಪಣ ಪ್ರಚಾರಾಂದೋಲನ ಅಂಗವಾಗಿ ಗಿಡಗಳನ್ನು ವಿತರಿಸಿದರು.

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿಯ ಕುಲಪತಿ ಡಾ.ಮಂಜುನಾಥ ಕೆ. ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ದೇಶಾದ್ಯಂತ 800 ಕೇಂದ್ರಗಳಲ್ಲಿ ಈ ಕಾರ್ಯಕ್ರಮ ಇಂದು ಆರಂಭಿಸಲಾಗಿದ್ದು, ಆರೋಗ್ಯದ ದೃಷ್ಠಿಯಿಂದ ಸಿರಿಧಾನ್ಯಗಳ ಸೇವನೆ ಅತ್ಯಂತ ಪ್ರಯೋಜನವಾಗಿದ್ದು, ಎಲ್ಲಾ ರೀತಿಯ ಪೌಷ್ಠಿಕಾಂಶಗಳು ಇದರಲ್ಲಿ ಇವೆ ಎಂದರು.

ಕಾರ್ಯಕ್ರಮದಲ್ಲಿ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಚಾಂತಾರು-ಹೇರೂರು ಗ್ರಾ.ಪಂ ನ ಅಧ್ಯಕ್ಷೆ ಮೀರಾ ಸದಾನಂದ ಪೂಜಾರಿ, ರಾಜ್ಯ ಮಟ್ಟದ ಸಾವಯವ ಕೃಷಿ ಉನ್ನತ ಮಟ್ಟದ ಸಮಿತಿ ಸದಸ್ಯ ರಾಘವೇಂದ್ರ ಉಪ್ಪೂರು, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿಯ ವಿಸ್ತರಣಾ ನಿರ್ದೇಶಕ ಡಾ. ಕೆ.ಸಿ. ಶಶಿಧರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ಮತ್ತಿತರರು ಉಪಸ್ಥಿತರಿದ್ದರು.

ವಲಯ ಕೃಷಿ ಮತ್ತುತೋಟಗಾರಿಕೆ ಸಹ ಸಂಶೋಧನಾ ನಿರ್ದೇಶಕ ಡಾ. ಲಕ್ಷ್ಮಣ ಸ್ವಾಗತಿಸಿದರು, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಹಾಗೂ ಹಿರಿಯ ವಿಜ್ಞಾನಿ ಡಾ.ಬಿ.ಧನಂಜಯ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!