Saturday, November 7, 2026
Saturday, November 7, 2026

ವಿವಿ ಮಟ್ಟದ ಕಬಡ್ಡಿ: ಆಳ್ವಾಸ್ ಪ್ರಥಮ, ತೆಂಕನಿಡಿಯೂರು ದ್ವಿತೀಯ

ವಿವಿ ಮಟ್ಟದ ಕಬಡ್ಡಿ: ಆಳ್ವಾಸ್ ಪ್ರಥಮ, ತೆಂಕನಿಡಿಯೂರು ದ್ವಿತೀಯ

Date:

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ನಡೆದ ಉಡುಪಿ ವಲಯ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ
ಪಂದ್ಯಾವಳಿಯಲ್ಲಿ ಮೂಡಬಿದ್ರೆಯ ಆಳ್ವಾಸ್ ಕಾಲೇಜು ಪ್ರಥಮ ಸ್ಥಾನವನ್ನು ಪಡೆಯಿತು.

ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಉಡುಪಿ ದ್ವಿತೀಯ ಸ್ಥಾನ ಪಡೆಯಿತು. ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆ ತೃತೀಯ ಸ್ಥಾನ ಗಳಿಸಿದರೆ ಶ್ರೀ ಶಾರದಾ ಕಾಲೇಜು ಬಸ್ರೂರು ನಾಲ್ಕನೇ ಸ್ಥಾನ ಪಡೆಯಿತು. ಈ ನಾಲ್ಕು ತಂಡಗಳು ಅಂತಿಮ ಸುತ್ತಿಗೆ ಆಯ್ಕೆಯಾದವು. ಒಟ್ಟು 26 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಲರ ಡಾ. ಗಣನಾಥ ಎಕ್ಕಾರು ವಹಿಸಿದ್ದರು.

ಉದ್ಯಮಿ ಹರಿಯಪ್ಪ ಕೋಟ್ಯಾನ್, ಶಿಕ್ಷಣ ತಜ್ಞ ದಯಾನಂದ ಶೆಟ್ಟಿ ಕೊಜಕುಳಿ, ನಗರಸಭಾ ಸದಸ್ಯ ವಿಜಯ್ ಕೊಡವೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಸಾದ್ ರಾವ್ ಎಂ., ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಉಪ ನಿರ್ದೇಶಕ ಡಾ. ಹರಿದಾಸ ಕೂಳೂರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು.

ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ವೆಂಕಟೇಶ ಹೆಚ್.ಕೆ. ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ವಂದಿಸಿದರು. ತೇಜಸ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

ಹುತಾತ್ಮರಾದ ಸೇನಾ ವರಿಷ್ಠ ದಂಡನಾಯಕ ಜನರಲ್ ಬಿಪಿನ್ ರಾವತ್ ರವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಗುಡುಗು ಸಹಿತ ಮಳೆ

ಉಡುಪಿ, ನ.6: ಉಡುಪಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಸಂಜೆ ಗುಡುಗು ಸಹಿತ...

ಗೃಹಲಕ್ಷ್ಮಿ ಫಲಾನುಭವಿಗಳೊಂದಿಗೆ ಸಿಎಂ ಸಂವಾದ

ಬೆಂಗಳೂರು, ನ.6: ಗೃಹಕಚೇರಿ ಕೃಷ್ಣಾದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ....

ಉಡುಪಿ ಶ್ರೀ ಕೃಷ್ಣ ಮಠ: ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ

ಉಡುಪಿ, ನ.6: ಕೃಷ್ಣ ಮಠದ ರಥಬೀದಿಯಲ್ಲಿರುವ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸವನ್ನು...
error: Content is protected !!