Wednesday, September 30, 2026
Wednesday, September 30, 2026

ಉಡುಪಿ: ಜೂನ್ 16 ರಂದು ಲಸಿಕಾ ಲಭ್ಯತೆ ವಿವರ

ಉಡುಪಿ: ಜೂನ್ 16 ರಂದು ಲಸಿಕಾ ಲಭ್ಯತೆ ವಿವರ

Date:

ಜಿಲ್ಲೆಯಲ್ಲಿ ಜೂನ್ 16 ರಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ, ಜೂನ್ 25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್) ನೀಡಲಾಗುವುದು.

ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆಯು ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ) ಹಾಗೂ ಉಡುಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಹಳೆ ಕಟ್ಟಡದಲ್ಲಿ (ಅಲಂಕಾರ್ ಥಿಯೇಟರ್ ಹತ್ತಿರ) 150 ಡೋಸ್ ಲಸಿಕೆ ಲಭ್ಯವಿದೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಜೂನ್ 16 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬೇಕು.

ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ಕುಂದಾಪುರ, ಸೆ.30: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿಗೆ...

ಮಂಗಳೂರಿನ ಎಂಆರ್‌ಪಿಎಲ್ ಸಂಕೀರ್ಣದಲ್ಲಿ ಸ್ಫೋಟ

ಮಂಗಳೂರು, ಸೆ.30: ಬುಧವಾರ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್)...

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...
error: Content is protected !!