Tuesday, September 29, 2026
Tuesday, September 29, 2026

ಉಡುಪಿ ನಗರ: ಜೂನ್ 15ರಂದು ಲಸಿಕೆ ಲಭ್ಯತೆ ಬಗ್ಗೆ ಮಾಹಿತಿ

ಉಡುಪಿ ನಗರ: ಜೂನ್ 15ರಂದು ಲಸಿಕೆ ಲಭ್ಯತೆ ಬಗ್ಗೆ ಮಾಹಿತಿ

Date:

ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ. ದಿನಾಂಕ 15/06/2021 ರಂದು ಕೊರೋನ ಮುಂಚೂಣಿ ಕಾರ್ಯಕರ್ತರಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಅಪರಾಹ್ನ 1.30 ರಿಂದ 4.30 ರ ವರೆಗೆ ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಲಸಿಕೆ ನೀಡಲಾಗುವುದು.

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ) ಅಪರಾಹ್ನ 1.30 ರಿಂದ 4.30: 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಶೀಲ್ಡ್ 1 ಮತ್ತು 2ನೇ ಡೋಸ್ (150 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ ಅಪರಾಹ್ನ 1.30 ರಿಂದ 4.30: ದಿನಾಂಕ 25/06/2021ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ), ಕೋವ್ಯಾಕ್ಸಿನ್ 2ನೇ ಡೋಸ್ (150 ಡೋಸ್ ಲಭ್ಯ) 

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ) ಅಪರಾಹ್ನ 1.30 ರಿಂದ 4.30: ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ ಕೋವಿಶೀಲ್ಡ್ ಲಸಿಕೆ (400 ಡೋಸ್) 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಶೀಲ್ಡ್ 1 ಮತ್ತು 2ನೇ ಡೋಸ್ (100 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ (ಸರಕಾರಿ ಪ್ರಾಥಮಿಕ ಶಾಲೆ ಆದಿಉಡುಪಿಯಲ್ಲಿ) ಅಪರಾಹ್ನ 1.30 ರಿಂದ 4.30: 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಶೀಲ್ಡ್ 1 ಮತ್ತು 2ನೇ ಡೋಸ್ (100 ಡೋಸ್ ಲಭ್ಯ) ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ)

ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿ.ಪ್ರಾ ಶಾಲೆ ಇಂದಿರಾನಗರ) ಅಪರಾಹ್ನ 1.30 ರಿಂದ 4.30: 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಶೀಲ್ಡ್ 1 ಮತ್ತು 2ನೇ ಡೋಸ್ (50 ಡೋಸ್ ಲಭ್ಯ) ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ ಕೋವಿಶೀಲ್ಡ್ ಲಸಿಕೆ (50 ಡೋಸ್ ಲಭ್ಯ)

ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಅರ್ಹರಿರುತ್ತಾರೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು HCW/FLW (ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಇವರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ 15.06.2021 ರಂದು ಅಪರಾಹ್ನ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸವಾಲುಗಳನ್ನು ಎದುರಿಸಲು ಶಿಕ್ಷಕರು ಸದಾ ತಯಾರಾಗಿರಬೇಕು: ಲೋಕೇಶ್

ಕೋಟ, ಸೆ.29: ಇಂದಿನ ಸ್ಪರ್ಧಾತ್ಮಕ ಶಿಕ್ಷಣ ರಂಗದಲ್ಲಿ ಶಿಕ್ಷಕರ ಎದುರು ಹಲವಾರು...

ಡಾ.ಮಿಥುನ್ ಯು: ಆಂತರಿಕ ಗುಣಮಟ್ಟ ಭರವಸೆ ಕೋಶದ ಸದಸ್ಯರಾಗಿ ಆಯ್ಕೆ

ಉಡುಪಿ, ಸೆ.29: ಮಂಗಳೂರಿನ ಪ್ರತಿಷ್ಠಿತ ಎ. ಜೆ. ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ...

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

ಉಡುಪಿ, ಸೆ.28: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ...

ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ: ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ, ಸೆ.28: ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳ...
error: Content is protected !!