Thursday, September 10, 2026
Thursday, September 10, 2026

ಉಡುಪಿ: ಜೂನ್ 22ರಂದು ಕೋವಿಡ್ ಲಸಿಕೆ ಲಭ್ಯತೆಯ ವಿವರ

ಉಡುಪಿ: ಜೂನ್ 22ರಂದು ಕೋವಿಡ್ ಲಸಿಕೆ ಲಭ್ಯತೆಯ ವಿವರ

Date:

ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 ಲಸಿಕೆ ಲಭ್ಯ:

ದಿನಾಂಕ 22/06/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಲಸಿಕೆಯನ್ನು ನೀಡಲಾಗುವುದು.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ) (ಸಮಯ: ಅಪರಾಹ್ನ 1.30 ರಿಂದ 4.30 ರ ವರೆಗೆ)- ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ/ಆದ್ಯತಾ ಗುಂಪಿನವರಿಗೆ ಮತ್ತು ಆರೋಗ್ಯ ಕಾರ್ಯಕರ್ತರುಗಳಿಗೆ /ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಪ್ರಥಮ ಡೋಸ್ ಮತ್ತು 2ನೇ ಡೋಸ್ ಲಸಿಕೆ-(ಕೋವಿಶೀಲ್ಡ್-70 & ಕೋವ್ಯಾಕ್ಸಿನ್-160 ಡೋಸ್ ಲಭ್ಯ)

ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) (ಸಮಯ: ಅಪರಾಹ್ನ 1.30 ರಿಂದ 4.30 ರ ವರೆಗೆ)- ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ/ಆದ್ಯತಾ ಗುಂಪಿನವರಿಗೆ ಮತ್ತು ಆರೋಗ್ಯ ಕಾರ್ಯಕರ್ತರುಗಳಿಗೆ/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಪ್ರಥಮ ಡೋಸ್ ಮತ್ತು 2ನೇ ಡೋಸ್ ಲಸಿಕೆ- ( ಕೋವ್ಯಾಕ್ಸಿನ್-60 ಡೋಸ್ ಲಭ್ಯ)

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ- 1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು ಪ್ರಥಮ ಡೋಸ್ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆ ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ 22.06.2021 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು. ಸಾರ್ವಜನಿಕರು ಸಹಕಾರ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ...

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

ಉಡುಪಿ, ಸೆ.9: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ...

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...
error: Content is protected !!