Tuesday, September 17, 2024
Tuesday, September 17, 2024

ಉಡುಪಿ: ಜೂನ್ 29 ರಂದು ಲಸಿಕಾ ಲಭ್ಯತೆ ವಿವರ

ಉಡುಪಿ: ಜೂನ್ 29 ರಂದು ಲಸಿಕಾ ಲಭ್ಯತೆ ವಿವರ

Date:

ಜಿಲ್ಲೆಯಲ್ಲಿ ಜೂನ್ 29 ರಂದು ಉಡುಪಿ ನಗರ ಪ್ರದೇಶದಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯ ಇರುವುದಿಲ್ಲ.

ನಗರ ಪ್ರದೇಶದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಬೆಳಗ್ಗೆ 9.30 ರಿಂದ ಸಂಜೆ 4.30 ರ ವರೆಗೆ ಜುಲೈ 5 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ – 40 ಡೋಸ್ ಲಸಿಕೆ ಲಭ್ಯವಿರುತ್ತದೆ.

ಜಿಲ್ಲೆಯಲ್ಲಿರುವ ಪದವಿ, ಡಿಪ್ಲೋಮ ಹಾಗೂ ಐ.ಟಿ ಕಾಲೇಜುಗಳ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ, ಬೋಧಕ ಸಿಬ್ಬಂದಿಗಳಿಗೆ ಹಾಗೂ ಬೆಂಬಲ ಸಿಬ್ಬಂದಿಗಳಿಗೆ ಕೋವಿಡ್-19 ಲಸಿಕಾ ಶಿಬಿರವನ್ನು ಕಾಲೇಜುಗಳಲ್ಲಿ ಆಯೋಜಿಸಲಾಗುತ್ತಿದ್ದು, ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿಗಳು ಹಾಗೂ ಬೆಂಬಲ ಸಿಬ್ಬಂದಿಗಳು ತಾವು ಕಲಿಯುತ್ತಿರುವ / ಕರ್ತವ್ಯ ನಿರ್ವಹಿಸುತ್ತಿರುವ ಕಾಲೇಜನ್ನು ಅಥವಾ ಕಾಲೇಜಿನ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಿ ಲಭ್ಯವಿರುವ ಲಸಿಕಾ ಪ್ರಮಾಣವನ್ನು ಆಧರಿಸಿ ಲಸಿಕಾಕರಣವನ್ನು ಖಚಿತಪಡಿಸಿಕೊಂಡು ಲಸಿಕೆ ಪಡೆಯಬಹುದು.

ಜಿಲ್ಲೆಯಲ್ಲಿರುವ ಪದವಿ, ಡಿಪ್ಲೋಮ ಹಾಗೂ ಐ.ಟಿ ಕಾಲೇಜುಗಳ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿಗಳು ಹಾಗೂ ಬೆಂಬಲ ಸಿಬ್ಬಂದಿಗಳು ತಾವು ಕಲಿಯುತ್ತಿರುವ / ಕರ್ತವ್ಯ ನಿರ್ವಹಿಸುತ್ತಿರುವ ಕಾಲೇಜನ್ನು ಹೊರತುಪಡಿಸಿ ಬೇರೆ ಕಾಲೇಜುಗಳಲ್ಲಿ ಲಸಿಕೆಯನ್ನು ಪಡೆಯುವಂತಿಲ್ಲ.

ಬೇರೆ ಜಿಲ್ಲೆಯ ಕಾಲೇಜುಗಳಲ್ಲಿ ಕಲಿಯುತ್ತಿರುವ ಜಿಲ್ಲೆಯ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಬಗ್ಗೆ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಣೆಯ ಮೂಲಕ ತಿಳಿಸಲಾಗುವುದು.

ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!