Home ಸುದ್ಧಿಗಳು ಪ್ರಾದೇಶಿಕ ಉಡುಪಿ: ಜೂನ್ 12ರಂದು ಲಸಿಕೆ ಲಭ್ಯತೆ ಬಗ್ಗೆ ಮಾಹಿತಿ

ಉಡುಪಿ: ಜೂನ್ 12ರಂದು ಲಸಿಕೆ ಲಭ್ಯತೆ ಬಗ್ಗೆ ಮಾಹಿತಿ

599
0

ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ. ಉಡುಪಿ ನಗರ ಪ್ರದೇಶದಲ್ಲಿ ನಾಳೆ ದಿನಾಂಕ 12/06/2021 ರಂದು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೊವಿಶೀಲ್ಡ್ ಪ್ರಥಮ ಡೋಸ್ ಇರುವುದಿಲ್ಲ.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ): ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ನೀಡಲಾಗುವುದು (230 ಡೋಸ್) ಮತ್ತು ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ನೀಡಲಾಗುವುದು (250 ಡೋಸ್).

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ (ಸರಕಾರಿ ಪ್ರಾಥಮಿಕ ಶಾಲೆ ಆದಿಉಡುಪಿಯಲ್ಲಿ): ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ನೀಡಲಾಗುವುದು(80 ಡೋಸ್) ಮತ್ತು ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ನೀಡಲಾಗುವುದು (80 ಡೋಸ್).

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ: ರಾಜ್ಯ ಸರಕಾರ ಗುರುತಿಸಿರುವ ಅನುಬಂಧ- 1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ನೀಡಲಾಗುವುದು(70 ಡೋಸ್) ಮತ್ತು ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ನೀಡಲಾಗುವುದು. (150 ಡೋಸ್).

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ): ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ನೀಡಲಾಗುವುದು (200 ಡೋಸ್). 
ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ): ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರಿಗೆ ಕೋವ್ಯಾಕ್ಸಿನ್ 2ನೇ ಡೋಸ್ ನೀಡಲಾಗುವುದು (100 ಡೋಸ್)

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ (ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಇವರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ 12.06.2021 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.