Home ಸುದ್ಧಿಗಳು ಪ್ರಾದೇಶಿಕ ಉಡುಪಿ: ಆಗಸ್ಟ್ 17 ರಂದು ಲಸಿಕೆ ಲಭ್ಯತೆ ವಿವರ

ಉಡುಪಿ: ಆಗಸ್ಟ್ 17 ರಂದು ಲಸಿಕೆ ಲಭ್ಯತೆ ವಿವರ

699
0

ಉಡುಪಿ: ದಿನಾಂಕ 17/08/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ, ಉಡುಪಿ)- ಕೋವಿಶೀಲ್ಡ್ ಪ್ರಥಮ ಡೋಸ್ ಮತ್ತು 2ನೇ ಡೋಸ್ – (ಒಟ್ಟು 300 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)- ಕೋವಿಶೀಲ್ಡ್ ಪ್ರಥಮ ಡೋಸ್-(200 ಡೋಸ್ ಲಭ್ಯ) ಕೋವಿಶೀಲ್ಡ್ 2ನೇ ಡೋಸ್ – (400 ಡೋಸ್ ಲಭ್ಯ)

ಕೆ.ಎಸ್.ವಿ.ಕೆ ಹಿರಿಯ ಪ್ರಾಥಮಿಕ ಶಾಲೆ, ಮೂಡಬೆಟ್ಟು, ಕೊಡವೂರು- ಕೋವಿಶೀಲ್ಡ್ ಪ್ರಥಮ ಡೋಸ್ ಮತ್ತು 2ನೇ ಡೋಸ್ -( (ಒಟ್ಟು 250 ಲಭ್ಯ)

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಹನುಮಂತ ನಗರ- ಕೋವಿಶೀಲ್ಡ್ ಪ್ರಥಮ ಡೋಸ್ ಮತ್ತು 2ನೇ ಡೋಸ್ – (ಒಟ್ಟು 250 ಲಭ್ಯ)

ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)- ಕೋವಿಶೀಲ್ಡ್ ಪ್ರಥಮ ಡೋಸ್ ಮತ್ತು ೨ನೇ ಡೋಸ್ – (ಒಟ್ಟು 200 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ- ಸಮಯ:ಬೆಳಿಗ್ಗೆ 10.00 ರಿಂದ ಅಪರಾಹ್ನ 1.00 ರವರೆಗೆ- ದಿನಾಂಕ 05/09/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (300 ಡೋಸ್ ಲಭ್ಯ.)

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.
ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು 84 ದಿನಗಳು ಮೀರಿದ ಎಲ್ಲಾ ಫಲಾನುಭವಿಗಳು 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಲಸಿಕಾ ಕೇಂದ್ರದಲ್ಲಿ ಈ ದಿನ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.