Tuesday, September 8, 2026
Tuesday, September 8, 2026

ಉಡುಪಿ: ಆಗಸ್ಟ್ 2 ರಂದು 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

ಉಡುಪಿ: ಆಗಸ್ಟ್ 2 ರಂದು 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

Date:

ಉಡುಪಿ: ಜಿಲ್ಲೆಯಲ್ಲಿ ಆಗಸ್ಟ್ 2 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಪ್ರಥಮ ಮತ್ತು 2 ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ಅಜ್ಜರಕಾಡು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ (ಜಿಲ್ಲಾ ಆಸ್ಪತ್ರೆಯ ಹಿಂಭಾಗ) -ಕೋವಿಶೀಲ್ಡ್ 1ನೇ ಡೋಸ್ (200 ಡೋಸ್ ಲಭ್ಯ).

ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ) -ಕೋವಿಶೀಲ್ಡ್ 1ನೇ ಡೋಸ್ (300 ಡೋಸ್ ಲಭ್ಯ), 2 ನೇ ಡೋಸ್ ಕೋವಿಶೀಲ್ಡ್ (600 ಡೋಸ್ ಲಭ್ಯ), ಕೋವ್ಯಾಕ್ಸಿನ್ 2ನೇ ಡೋಸ್ (120 ಡೋಸ್ ಲಭ್ಯ).

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ (ಅಲಂಕಾರ್ ಥಿಯೇಟರ್ ಬಳಿ)- ಕೋವಿಶೀಲ್ಡ್ 2ನೇ ಡೋಸ್ (300 ಡೋಸ್ ಲಭ್ಯ) (ಆನ್ ಲೈನ್ ನೋಂದಣಿ ಸೇರಿ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ  (ಖಾಸಗಿ ಪ್ರಾಥಮಿಕ ಶಾಲೆ ಆದಿಉಡುಪಿ)- ಕೋವಿಶೀಲ್ಡ್ 2ನೇ ಡೋಸ್ (350 ಡೋಸ್ ಲಭ್ಯ) (ಆನ್ ಲೈನ್ ನೋಂದಣಿ ಸೇರಿ)

ಎಫ್.ಪಿ.ಎ.ಐ ಕುಕ್ಕಿಕ್ಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಂದಿರಾನಗರ)- ಕೋವಿಶೀಲ್ಡ್ 1ನೇ ಡೋಸ್ (50 ಡೋಸ್ ಲಭ್ಯ), ಕೋವಿಶೀಲ್ಡ್ 2ನೇ ಡೋಸ್ (200 ಲಭ್ಯ)

ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ರಿಂದ ಅಪರಾಹ್ನ 1 ರವರೆಗೆ- ಆಗಸ್ಟ್ 20ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2 ನೇ ಡೋಸ್ ಕೋವಿಶೀಲ್ಡ್ 200 ಡೋಸ್ ಲಸಿಕೆ ಲಭ್ಯವಿರುತ್ತದೆ.

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ, ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!