Sunday, February 8, 2026
Sunday, February 8, 2026

ಉಡುಪಿ: ಆಗಸ್ಟ್ 6 ರಂದು ಲಸಿಕೆ ಲಭ್ಯತೆ ಮಾಹಿತಿ

ಉಡುಪಿ: ಆಗಸ್ಟ್ 6 ರಂದು ಲಸಿಕೆ ಲಭ್ಯತೆ ಮಾಹಿತಿ

Date:

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 6 ರಂದು ಕೋವಿಡ್-19 2ನೇ ಡೋಸ್ ಲಸಿಕೆ ಮಾತ್ರ ಲಭ್ಯ. ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 2 ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂತ್ ಸಿಸಿಲಿ ಶಾಲೆ, ಉಡುಪಿ)-ಕೋವಿಶೀಲ್ಡ್ 2ನೇ ಡೋಸ್ (100 ಡೋಸ್ ಲಭ್ಯ).

ಎಫ್.ಪಿ.ಎ.ಐ ಕುಕ್ಕಿಕ್ಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಂದಿರಾನಗರ)- ಕೋವಿಶೀಲ್ಡ್ 2ನೇ ಡೋಸ್ (50 ಡೋಸ್ ಲಭ್ಯ), ಕೋವ್ಯಾಕ್ಸಿನ್ 2ನೇ ಡೋಸ್ (100 ಲಭ್ಯ)

ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್ ಆಸ್ಪತ್ರೆ) ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ರಿಂದ ಅಪರಾಹ್ನ 1 ರವರೆಗೆ- ಆಗಸ್ಟ್ 20 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನ ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 4 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ, ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!