ಜಿಲ್ಲೆಯಲ್ಲಿ ಜುಲೈ 10 ರಂದು ಉಡುಪಿ ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.
ನಗರದ ಜಿಲ್ಲಾ ಆಸ್ಪತ್ರೆಯಲ್ಲಿ (ಸೇಂಟ್ ಸಿಸಿಲಿ ಶಾಲೆ) 2ನೇ ಡೋಸ್ ಕೋವಿಶೀಲ್ಡ್ 250 ಡೋಸ್, ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ) 2ನೇ ಡೋಸ್ ಕೋವಿಶೀಲ್ಡ್ -250 ಡೋಸ್ ಹಾಗೂ 2 ನೇ ಕೋವ್ಯಾಕ್ಸಿನ್ 150 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡದಲ್ಲಿ (ಅಲಂಕಾರ್ ಥಿಯೇಟರ್ ಹತ್ತಿರ) 2ನೇ ಡೋಸ್ ಕೋವಿಶೀಲ್ಡ್ 150 ಡೋಸ್, ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ) 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಹಾಗೂ ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜುಲೈ 15 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ 150 ಡೋಸ್ ಲಭ್ಯವಿದೆ.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು.
ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಹಾಗೂ 45 ವರ್ಷ ಮೇಲ್ಪಟ್ಟ ವಯೋಮಿತಿಯ ಸಾರ್ವಜನಿಕರಿಗೆ ಪ್ರಥಮ ಡೋಸ್ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.