Tuesday, October 27, 2026
Tuesday, October 27, 2026

ಉಡುಪಿ: ಜುಲೈ 12 ರಂದು ಲಸಿಕೆ ಲಭ್ಯತೆ ವಿವರ

ಉಡುಪಿ: ಜುಲೈ 12 ರಂದು ಲಸಿಕೆ ಲಭ್ಯತೆ ವಿವರ

Date:

ಜಿಲ್ಲೆಯಲ್ಲಿ ಜುಲೈ 12ರಂದು ಉಡುಪಿ ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ) 2ನೇ ಡೋಸ್ ಕೋವಿಶೀಲ್ಡ್ 130 ಡೋಸ್, ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ) 2ನೇ ಡೋಸ್ ಕೋವಿಶೀಲ್ಡ್ -100 ಡೋಸ್ ಲಭ್ಯ, ಕೋವ್ಯಾಕ್ಸಿನ್ 2ನೇ ಡೋಸ್ -150 ಡೋಸ್ ಲಭ್ಯ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡದಲ್ಲಿ (ಅಲಂಕಾರ್ ಥಿಯೇಟರ್ ಹತ್ತಿರ) 2ನೇ ಡೋಸ್ ಕೋವಿಶೀಲ್ಡ್ 250 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ (ಖಾಸಗಿ ಪ್ರಾಥಮಿಕ ಶಾಲೆ ಆದಿಉಡುಪಿಯಲ್ಲಿ) ಕೋವ್ಯಾಕ್ಸಿನ್ 2ನೇ ಡೋಸ್ (150 ಡೋಸ್ ಲಭ್ಯ), ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ) 2ನೇ ಡೋಸ್ ಕೋವಿಶೀಲ್ಡ್ 70 ಡೋಸ್ ಲಭ್ಯ, ಕೋವ್ಯಾಕ್ಸಿನ್ 2ನೇ ಡೋಸ್- 20 ಡೋಸ್ ಲಭ್ಯ ಹಾಗೂ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ (ಬಿ.ಆರ್.ಎಸ್) ಜುಲೈ 15ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ 100 ಡೋಸ್ ಲಭ್ಯ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2 ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು.

ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಹಾಗೂ 45 ವರ್ಷ ಮೇಲ್ಪಟ್ಟ ವಯೋಮಿತಿಯ ಸಾರ್ವಜನಿಕರಿಗೆ ಪ್ರಥಮ ಡೋಸ್ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1 COMMENT

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೊಂಟ ನೋವಿನಿಂದ ಬಳಲುವವರಿಗೆ ಉಚಿತ ಆಯುರ್ವೇದ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಮಣಿಪಾಲ, ಅ.27: ಮುನಿಯಾಲ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಾಯಚಿಕಿತ್ಸಾ...

ಹೂವಿನ ಕೋಲು ಮತ್ತು ಯಕ್ಷಗಾನ ಪ್ರಾತ್ಯಕ್ಷಿಕೆ

ಕುಂದಾಪುರ, ಅ.27: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಿದ್ಯಾಸಂಸ್ಥೆಗಳ ಆವರಣ ಮಂದರ್ತಿಯಲ್ಲಿ ನಡೆದ...

ಸಿಎ ಇಂಟರ್ಮಿಡಿಯೇಟ್ ಫಲಿತಾಂಶ: ತ್ರಿಶಾ ಸಂಸ್ಥೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿರುವ ಸೆಪ್ಟೆಂಬರ್...
error: Content is protected !!