Friday, June 5, 2026
Friday, June 5, 2026

ಉಡುಪಿ: ಜು.17 ರಂದು ಎರಡನೇ ಡೋಸ್ ಲಸಿಕೆ ಲಭ್ಯ

ಉಡುಪಿ: ಜು.17 ರಂದು ಎರಡನೇ ಡೋಸ್ ಲಸಿಕೆ ಲಭ್ಯ

Date:

ಜಿಲ್ಲೆಯಲ್ಲಿ ಜುಲೈ 17 ರಂದು ಉಡುಪಿ ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ -100 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡದಲ್ಲಿ (ಅಲಂಕಾರ್ ಥಿಯೇಟರ್ ಹತ್ತಿರ) 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್, ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ 150 ಡೋಸ್ ಹಾಗೂ ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜುಲೈ 25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆಯನ್ನು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3.30 ರ ವರೆಗೆ ನೀಡಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2 ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು, ಜೂ.4: ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ,...

ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು: ಡಾ.ಸುಧಾಕರ್ ಶೆಟ್ಟಿ; ಸೇನೆಗೆ ಒಂದು ಲಕ್ಷ ರೂಪಾಯಿ ಹಸ್ತಾಂತರದ ಮೂಲಕ ಮಾಲಿಕೆ ಪ್ರಾರಂಭ

ಕಾರ್ಕಳ, ಜೂ.4: ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ನಮ್ಮ ವ್ಯಕ್ತಿತ್ವದೊಂದಿಗೆ ಜೋಡಿಸಿಕೊಂಡಾಗ ರಾಷ್ಟ್ರ...

ಶಿರ್ವ: ಜೀವನೋಪಾಯ ಸೇವಾ ಕೇಂದ್ರ ಉದ್ಘಾಟನೆ

ಶಿರ್ವ, ಜೂ.೪: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ, ಜಿಲ್ಲಾ...

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

ಬೆಂಗಳೂರು, ಜೂ.4: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಸಮಾಜ ಸೇವಕರು...
error: Content is protected !!