Wednesday, July 29, 2026
Wednesday, July 29, 2026

ಉಡುಪಿ: ಜುಲಾಯಿ 19 ರಂದು ಲಸಿಕೆ ಲಭ್ಯತೆ ವಿವರ

ಉಡುಪಿ: ಜುಲಾಯಿ 19 ರಂದು ಲಸಿಕೆ ಲಭ್ಯತೆ ವಿವರ

Date:

ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಮತ್ತು ಆದ್ಯತಾ ಗುಂಪಿನವರಿಗೆ ಪ್ರಥಮ ಮತ್ತು 2ನೇ ಡೋಸ್ ಕೋವಿಡ್-19 ಲಸಿಕೆ ಲಭ್ಯ.

ಜುಲಾಯಿ 19 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾ ಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ/ಗರ್ಭಿಣಿಯರಿಗೆ, ಹಾಲುಣಿಸುವ ತಾಯಂದಿರಿಗೆ, ವಿಕಲಚೇತನರಿಗೆ ಮತ್ತು ಅವರ ಆರೈಕೆದಾರರಿಗೆ ಮತ್ತು ಎಸ್.ಎ.ಎಮ್., ಎಮ್.ಎ.ಎಮ್. ಮಕ್ಕಳ ಆರೈಕೆದಾರರಿಗೆ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ, ಅಜ್ಜರಕಾಡು ಉಡುಪಿ (ಜಿಲ್ಲಾ ಆಸ್ಪತ್ರೆಯ ಹಿಂಭಾಗ)– ಕೋವಿಶೀಲ್ಡ್ – (200 ಡೋಸ್ ಲಭ್ಯ)

ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)- ಕೋವಿಶೀಲ್ಡ್ – (280 ಡೋಸ್‌ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)- ಕೋವಿಶೀಲ್ಡ್ – (75 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ- ಜುಲಾಯಿ 25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ)

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ- 1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು/ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ಗರ್ಭಿಣಿಯರು, ಹಾಲುಣಿಸುವ ತಾಯಂದಿರು, ವಿಕಲಚೇತನರು ಮತ್ತು ಅವರ ಆರೈಕೆದಾರರು ಮತ್ತು ಎಸ್.ಎ.ಎಮ್., ಎಮ್.ಎ.ಎಮ್. ಮಕ್ಕಳ ಆರೈಕೆದಾರರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!