Tuesday, September 8, 2026
Tuesday, September 8, 2026

ಉಡುಪಿ: ಜು.22 ರಂದು ಲಸಿಕೆ ಲಭ್ಯತೆ ವಿವರ

ಉಡುಪಿ: ಜು.22 ರಂದು ಲಸಿಕೆ ಲಭ್ಯತೆ ವಿವರ

Date:

ಉಡುಪಿ: ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯ

ದಿನಾಂಕ 22/07/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾ ಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯ.

ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ, ಅಜ್ಜರಕಾಡು ಉಡುಪಿ (ಜಿಲ್ಲಾ ಆಸ್ಪತ್ರೆಯ ಹಿಂಭಾಗ)- 2ನೇ ಡೋಸ್ ಕೋವಿಶೀಲ್ಡ್ ಲಸಿಕೆ- (100 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)- 2ನೇ ಡೋಸ್ ಕೋವಿಶೀಲ್ಡ್ ಲಸಿಕೆ- (150 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆಕಟ್ಟಡ (ಅಲಂಕಾರ ಥಿಯೇಟರ್ ಹತ್ತಿರ)- 2ನೇ ಡೋಸ್ ಕೋವಿಶೀಲ್ಡ್ ಲಸಿಕೆ- (100 ಡೋಸ್ ಲಭ್ಯ)

ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ- 2ನೇ ಡೋಸ್ ಕೋವಿಶೀಲ್ಡ್ ಲಸಿಕೆ- (80 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ (ಸಮಯ: ಬೆಳಿಗ್ಗೆ 10.00 ರಿಂದ ಅಪರಾಹ್ನ 1.00 ರ ವರೆಗೆ)- ದಿನಾಂಕ 28/07/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ)

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ- 1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾ ಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!