Sunday, September 6, 2026
Sunday, September 6, 2026

ಉಡುಪಿ: ಜು.28 ರಂದು ಎರಡನೇ ಡೋಸ್ ಲಸಿಕೆ ಲಭ್ಯ

ಉಡುಪಿ: ಜು.28 ರಂದು ಎರಡನೇ ಡೋಸ್ ಲಸಿಕೆ ಲಭ್ಯ

Date:

ಉಡುಪಿ: ಜಿಲ್ಲೆಯಲ್ಲಿ ಜು. 28 ರಂದು ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರ, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು, 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ವಿಕಲಚೇತನರಿಗೆ ಮತ್ತು ಅವರ ಆರೈಕೆದಾರರಿಗೆ ಕೋವಿಡ್-19 2 ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ಅಜ್ಜರಕಾಡು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ 2 ನೇ ಡೋಸ್ ಕೋವಿಶೀಲ್ಡ್ 200 ಡೋಸ್ ಲಸಿಕೆ, ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಮತ್ತು ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆಗಸ್ಟ್ 3 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು, 45 ವರ್ಷ ಮೇಲ್ಪಟ್ಟ ಸಾರ್ವಜನಿಕರು, ವಿಕಲಚೇತನರು ಮತ್ತು ಅವರ ಆರೈಕೆದಾರರು ಕೋವಿಡ್-19 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ, ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!