Monday, September 7, 2026
Monday, September 7, 2026

ಉಡುಪಿ: ಜುಲೈ 3 ರಂದು ಲಸಿಕೆ ಲಭ್ಯತೆ ವಿವರ

ಉಡುಪಿ: ಜುಲೈ 3 ರಂದು ಲಸಿಕೆ ಲಭ್ಯತೆ ವಿವರ

Date:

ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 2ನೇ ಡೋಸ್ ಕೋವಿಡ್-19 ಲಸಿಕೆ ಲಭ್ಯ.

ದಿನಾಂಕ 03/07/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾ ಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯ.

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ)- 2ನೇ ಡೋಸ್ ಕೋವಿಶೀಲ್ಡ್ – (200 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)- 2ನೇ ಡೋಸ್ ಕೋವಿಶೀಲ್ಡ್ – (300 ಡೋಸ್ ಲಭ್ಯ), ಕೋವ್ಯಾಕ್ಸಿನ್ 2ನೇ ಡೋಸ್ -(150 ಡೋಸ್‌ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ (ಖಾಸಗಿ ಪ್ರಾಥಮಿಕ ಶಾಲೆ ಆದಿ ಉಡುಪಿಯಲ್ಲಿ)- 2ನೇ ಡೋಸ್ ಕೋವಿಶೀಲ್ಡ್ – (150 ಡೋಸ್ ಲಭ್ಯ)

ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)- 2ನೇ ಡೋಸ್ ಕೋವಿಶೀಲ್ಡ್ – (150 ಡೋಸ್‌ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ- ದಿನಾಂಕ 07/07/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (150 ಡೋಸ್ ಲಭ್ಯ.)

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ- 1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು/ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ 03.07.2021 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.

ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ. ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ವಯೋಮಿತಿಯ ಸಾರ್ವಜನಿಕರಿಗೆ ಪ್ರಥಮ ಡೋಸ್ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!