Saturday, February 7, 2026
Saturday, February 7, 2026

ಉಡುಪಿ: ಜುಲೈ 5 ರಂದು ಲಸಿಕೆ ಲಭ್ಯತೆ ವಿವರ

ಉಡುಪಿ: ಜುಲೈ 5 ರಂದು ಲಸಿಕೆ ಲಭ್ಯತೆ ವಿವರ

Date:

ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 2ನೇ ಡೋಸ್ ಕೋವಿಡ್-19 ಲಸಿಕೆ ಲಭ್ಯ.

ದಿನಾಂಕ 05/07/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾ ಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯ.

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ)- 2ನೇ ಡೋಸ್ ಕೋವಿಶೀಲ್ಡ್ – (200 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)- 2ನೇ ಡೋಸ್ ಕೋವಿಶೀಲ್ಡ್ – (200 ಡೋಸ್ ಲಭ್ಯ), ಕೋವ್ಯಾಕ್ಸಿನ್ 2ನೇ ಡೋಸ್ -(200 ಡೋಸ್‌ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ (ಖಾಸಗಿ ಪ್ರಾಥಮಿಕ ಶಾಲೆ ಆದಿಉಡುಪಿಯಲ್ಲಿ)- 2ನೇ ಡೋಸ್ ಕೋವಿಶೀಲ್ಡ್ – (150 ಡೋಸ್ ಲಭ್ಯ)

ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)- 2ನೇ ಡೋಸ್ ಕೋವಿಶೀಲ್ಡ್ – (100 ಡೋಸ್‌ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ- ದಿನಾಂಕ 15/07/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (150 ಡೋಸ್ ಲಭ್ಯ.)

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ- 1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು/ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ 05.07.2021 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.

ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ. ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ವಯೋಮಿತಿಯ ಸಾರ್ವಜನಿಕರಿಗೆ ಪ್ರಥಮ ಡೋಸ್ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!