Saturday, November 23, 2024
Saturday, November 23, 2024

ಉಡುಪಿ: ಜುಲೈ 7 ರಂದು ಲಸಿಕಾ ಲಭ್ಯತೆ ವಿವರ

ಉಡುಪಿ: ಜುಲೈ 7 ರಂದು ಲಸಿಕಾ ಲಭ್ಯತೆ ವಿವರ

Date:

ಜಿಲ್ಲೆಯಲ್ಲಿ ಜುಲೈ 7 ರಂದು ಉಡುಪಿ ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ನಗರದ ಜಿಲ್ಲಾ ಆಸ್ಪತ್ರೆಯಲ್ಲಿ (ಸೇಂಟ್ ಸಿಸಿಲಿ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್, ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ -120 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡದಲ್ಲಿ (ಅಲಂಕಾರ್ ಥಿಯೇಟರ್ ಹತ್ತಿರ) 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್, ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ ( ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಹಾಗೂ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜುಲೈ 15 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ 100 ಡೋಸ್ ಲಭ್ಯವಿದೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2 ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು.

ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಹಾಗೂ 45 ವರ್ಷ ಮೇಲ್ಪಟ್ಟ ವಯೋಮಿತಿಯ ಸಾರ್ವಜನಿಕರಿಗೆ ಪ್ರಥಮ ಡೋಸ್ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾವ್ಯವನ್ನು ರಂಗರೂಪಕ್ಕೆ ತರುವುದು ಸಾಹಸ: ಪ್ರೊ.ಬಿ.ಎ. ವಿವೇಕ ರೈ

ಮೂಡುಬಿದಿರೆ, ನ.23: ಬರಹ ಅಥವಾ ಕಾವ್ಯವನ್ನು ರಂಗರೂಪಕ್ಕೆ ತರುವುದು ಒಂದು ಸಾಹಸ....

ನಮ್ಮ ಉಳಿವಿಗಾಗಿ ಪಶ್ಚಿಮ ಘಟ್ಟದ ಸಂರಕ್ಷಣೆ ಅತ್ಯಗತ್ಯ

ಮಂಗಳೂರು, ನ.23: ‘ಸಾರ ಸಂಸ್ಥೆ’ ‘ಪರಿಸರಕ್ಕಾಗಿ ನಾವು’ ವೇದಿಕೆಯ ಸಹಯೋಗದೊಂದಿಗೆ ಡಾ....

ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಉಡುಪಿ, ನ.23: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ

ಉಡುಪಿ, ನ.22: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ...
error: Content is protected !!