Saturday, February 28, 2026
Saturday, February 28, 2026

ಉಡುಪಿ: ಜುಲೈ 8 ರಂದು ಲಸಿಕೆ ಲಭ್ಯತೆ ವಿವರ

ಉಡುಪಿ: ಜುಲೈ 8 ರಂದು ಲಸಿಕೆ ಲಭ್ಯತೆ ವಿವರ

Date:

ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 2ನೇ ಡೋಸ್ ಕೋವಿಡ್-19 ಲಸಿಕೆ ಲಭ್ಯ

ದಿನಾಂಕ 08/07/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾ ಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ ೪೫ ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯ.

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ)- 2ನೇ ಡೋಸ್ ಕೋವಿಶೀಲ್ಡ್ – (150 ಡೋಸ್ ಲಭ್ಯ) ಕೋವ್ಯಾಕ್ಸಿನ್ 2ನೇ ಡೋಸ್ – (100 ಡೋಸ್‌ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ- ದಿನಾಂಕ 15/07/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್ ಲಭ್ಯ.)

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ- 1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು/ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.

ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ. ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ವಯೋಮಿತಿಯ ಸಾರ್ವಜನಿಕರಿಗೆ ಪ್ರಥಮ ಡೋಸ್ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!