Thursday, July 30, 2026
Thursday, July 30, 2026

ಉಡುಪಿ: ಜೂನ್ 23ರಂದು ಕೋವಿಡ್ ಲಸಿಕೆ ಲಭ್ಯತೆ ವಿವರ

ಉಡುಪಿ: ಜೂನ್ 23ರಂದು ಕೋವಿಡ್ ಲಸಿಕೆ ಲಭ್ಯತೆ ವಿವರ

Date:

ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 ಲಸಿಕೆ ಲಭ್ಯ:

ದಿನಾಂಕ 23/06/2021 ರಂದು ಸಮಯ ಬೆಳಿಗ್ಗೆ 9.30 ರಿಂದ 4.30 ರ ವರೆಗೆ ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ/ಆದ್ಯತಾ ಗುಂಪಿನವರಿಗೆ ಮತ್ತು ಆರೋಗ್ಯ ಕಾರ್ಯಕರ್ತರುಗಳಿಗೆ/ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಪ್ರಥಮ ಡೋಸ್ ಮತ್ತು 2ನೇ ಡೋಸ್ ಕೋವಿಡ್-19 ಲಸಿಕೆಯನ್ನು ನೀಡಲಾಗುವುದು

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ)- ಕೋವಿಶೀಲ್ಡ್ -(200 ಡೋಸ್ ಲಭ್ಯ)

ಕಮಲಬಾಯಿ ಪ್ರೌಢಶಾಲೆ, ಕಡಿಯಾಳಿ- ಕೋವಿಶೀಲ್ಡ್ -(300 ಡೋಸ್ ಲಭ್ಯ)

ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)- ಕೋವಿಶೀಲ್ಡ್ – (280 ಡೋಸ್ ಲಭ್ಯ), ಕೋವ್ಯಾಕ್ಸಿನ್ -(70 ಡೋಸ್ ಲಭ್ಯ)

ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ- ದಿನಾಂಕ 25/06/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (150 ಡೋಸ್ ಲಭ್ಯ)

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾ ಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 ಪ್ರಥಮ ಡೋಸ್ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ 23.06.2021 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.

ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಅರ್ಹರಿರುತ್ತಾರೆ. ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!