Saturday, November 23, 2024
Saturday, November 23, 2024

ಉಡುಪಿ: ಜೂನ್ 25 ರಂದು ಲಸಿಕಾ ಲಭ್ಯತೆ ವಿವರ

ಉಡುಪಿ: ಜೂನ್ 25 ರಂದು ಲಸಿಕಾ ಲಭ್ಯತೆ ವಿವರ

Date:

ಜಿಲ್ಲೆಯಲ್ಲಿ ಜೂನ್ 25 ರಂದು ಉಡುಪಿ ನಗರ ಪ್ರದೇಶದಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ.

ನಗರ ಪ್ರದೇಶದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಬೆಳಗ್ಗೆ 9.30 ರಿಂದ ಸಂಜೆ 4.30 ರ ವರೆಗೆ ಜುಲೈ 5 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ -150 ಡೋಸ್ ಲಸಿಕೆ ಲಭ್ಯವಿರುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 ಪ್ರಥಮ ಡೋಸ್ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆ ಪಡೆಯಬಹುದು.

ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

ಬಸ್ರೂರು, ನ.22: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾಮಟ್ಟದ...
error: Content is protected !!