ಮಲ್ಪೆ: ಮಲ್ಪೆ ಮೀನುಗಾರರ ಸಂಘ (ರಿ.) ಮಲ್ಪೆ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಇವರ ಸಹಯೋಗದೊಂದಿಗೆ ಮಲ್ಪೆ ಮೀನುಗಾರರ ಸಂಘದಲ್ಲಿ ಬುಧವಾರ ಮೀನುಗಾರರಿಗೆ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮ ನಡೆಯಿತು. ಶಾಸಕ ಕೆ. ರಘುಪತಿ ಭಟ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಕಾರ್ಯದರ್ಶಿ ರತ್ನಾಕರ ಸಾಲ್ಯಾನ್, ಉಡುಪಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ, ತಾಲೂಕು ಆರೋಗ್ಯಾಧಿಕಾರಿ ವಾಸುದೇವ ಉಪಾಧ್ಯಾಯ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಕೆ. ಗಣೇಶ್, ಮಲ್ಪೆ ಮೀನುಗಾರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.