Wednesday, October 28, 2026
Wednesday, October 28, 2026

ಉಡುಪಿ: ಜೂನ್ 10ರ ಲಸಿಕಾ ಲಭ್ಯತೆ ವಿವರ

ಉಡುಪಿ: ಜೂನ್ 10ರ ಲಸಿಕಾ ಲಭ್ಯತೆ ವಿವರ

Date:

ಜಿಲ್ಲೆಯಲ್ಲಿ ಜೂನ್ 10 ರಂದು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ (ಸೇಂಟ್ ಸಿಸಿಲಿ ಶಾಲೆ) 100 ಡೋಸ್ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗುವುದು.

ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು ಹಾಗೂ ದುರ್ಬಲ ಗುಂಪಿನ ಫಲಾನುಭವಿಗಳಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ 150 ಡೋಸ್, ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) 50 ಡೋಸ್ ಹಾಗೂ ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ) 400 ಡೋಸ್ ಲಸಿಕೆ ನೀಡಲಾಗುವುದು.

45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ 2 ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆಯನ್ನು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ 150 ಡೋಸ್, ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ) 100 ಡೋಸ್, ಉಡುಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಸರಕಾರಿ ಪ್ರಾಥಮಿಕ ಶಾಲೆ ಆದಿಉಡುಪಿ) 100 ಡೋಸ್ ಹಾಗೂ ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) 50 ಡೋಸ್ ಲಸಿಕೆ ನೀಡಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ, 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಜೂನ್ 10 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬೇಕು. ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹಾಗೂ

ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 5 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಅರ್ಹರಿರುತ್ತಾರೆ. ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ. ಬಿ. ಬಿ. ಹೆಗ್ಡೆ ಕಾಲೇಜು: ಕೈಗಾರಿಕಾ ಭೇಟಿ

ಕುಂದಾಪುರ, ಅ.28: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಮೂರನೇ ಟಿ20: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ

ಯು.ಬಿ.ಎನ್.ಡಿ., ಅ.27: ವೆಲ್ಲಿಂಗ್ಟನ್‌ನಲ್ಲಿ ಮಂಗಳವಾರ ನಡೆದ ಮೂರನೇ ಟಿ20 ಪಂದ್ಯದಲ್ಲಿ, ಆತಿಥೇಯ...

ಅಂತಿಮ ಮತದಾರರ ಪಟ್ಟಿಯ ಸಿ.ಡಿ ಹಸ್ತಾಂತರ

ಮಣಿಪಾಲ, ಅ.27: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ – 2026...

ಅ. 30: ನೇರ ಸಂದರ್ಶನ

ಉಡುಪಿ, ಅ.27: ಮಂಗಳೂರು ಫರ‍್ಸ್, ಉಡುಪಿ ನೀಯರ್ ಕಲ್ಯಾಣ್‌ಪುರ ಉಪ್ಪೂರು ಬಿಡ್ಜ್,...
error: Content is protected !!