Saturday, January 18, 2025
Saturday, January 18, 2025

ಕೋವಿಡ್ ನಿಯಂತ್ರಣಕ್ಕೆ ಲಸಿಕೆಯಿಂದ ಮಾತ್ರ ಪರಿಹಾರ: ಸಂಸದೆ ಶೋಭಾ ಕರಂದ್ಲಾಜೆ

ಕೋವಿಡ್ ನಿಯಂತ್ರಣಕ್ಕೆ ಲಸಿಕೆಯಿಂದ ಮಾತ್ರ ಪರಿಹಾರ: ಸಂಸದೆ ಶೋಭಾ ಕರಂದ್ಲಾಜೆ

Date:

ಕೋವಿಡ್ ನಿಯಂತ್ರಣಕ್ಕೆ ಲಸಿಕೆ ಪಡೆಯುವುದು ಮಾತ್ರವೇ ಪರಿಣಾಮಕಾರಿಯಾಗಿದ್ದು, ಸಾರ್ವಜನಿಕರು ಯಾವುದೇ ಅಪಪ್ರಚಾರಗಿಳಿಗೆ ಕಿವಿಗೊಡದೇ ಸರ್ಕಾರದಿಂದ ನೀಡುವ ಉಚಿತ ಕೋವಿಡ್ ಲಸಿಕೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವಂತೆ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಅವರು ಸೋಮವಾರ ಪುತ್ತೂರಿನ ಹನುಮಂತನಗರ ಶಾಲೆಯಲ್ಲಿ ಆಯೋಜಿಸಿದ್ದ ಕೋವಿಡ್ 19 ಲಸಿಕಾ ಮಹಾಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಂದು ಇಡೀ ವಿಶ್ವದಲ್ಲೇ ಅತ್ಯಂತ ದೊಡ್ಡ ಕೋವಿಡ್ ಲಸಿಕಾ ಅಭಿಯಾನವನ್ನು ದೇಶದಾದ್ಯಂತ ಹಮ್ಮಿಕೊಳ್ಳಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 337095 ಮಂದಿ ಪ್ರಥಮ ಡೋಸ್ ಲಸಿಕೆಯನ್ನು ಪಡೆದಿದ್ದು ಶೇ.25 ಸಾಧನೆ ಆಗಿದೆ, 95477 ಮಂದಿ ಎರಡನೇ ಡೋಸ್ ಪಡೆದು 7% ಸಾಧನೆ ಮಾಡಲಾಗಿದೆ, ಲಸಿಕಾ ಅಭಿಯಾನದ ಇಂದು 30000 ಡೋಸ್ ಕೋವಿಡ್ ಲಸಿಕೆ ನೀಡಲಿದ್ದು, ಒಟ್ಟು ಜಿಲ್ಲೆಯಲ್ಲಿ ಪ್ರಥಮ ಡೋಸ್ 367000 ಮಂದಿಗೆ ನೀಡುವ ಮೂಲಕ ಶೇ.30 ಸಾಧನೆ ಆಗಲಿದೆ, 3 ನೇ ಅಲೆಯ ವೇಳೆಗೆ ಜಿಲ್ಲೆಯಲ್ಲಿ 70 % ರಿಂರ 80% ದ ವರೆಗೆ ಪ್ರಥಮ ಡೋಸ್ ನೀಡುವ ಗುರಿ ಹೊಂದಲಾಗಿದೆ.

ಈ ಹಿಂದೆ ಜಿಲ್ಲೆಯಲ್ಲಿ ಸಾಕಷ್ಟು ಸಂಖ್ಯೆಯ ಲಸಿಕೆ ಸರಬರಾಜು ಆಗಿದ್ದರೂ ಸಹ, ಲಸಿಕೆ ಕುರಿತು ಅಪಪ್ರಚಾರದಿಂದ ಲಸಿಕೆ ಪಡೆಯುವವರ ಸಂಖ್ಯೆ ಕಡಿಮೆಯಾಗಿದ್ದು, ನಂತರದಲ್ಲಿ ಲಸಿಕೆ ವ್ಯರ್ಥವಾಗಬಾರದು ಎಂಬ ಉದ್ದೇಶದಿಂದ ಜಿಲ್ಲೆಗೆ ಕಡಿಮೆ ಲಸಿಕೆ ಸರಬರಾಜು ಮಾಡಿದ್ದರಿಂದ ಲಸಿಕೆಯ ಕೊರತೆ ಉಂಟಾಗಿತ್ತು ಆದರೆ ಪ್ರಸ್ತುತ ಸಾರ್ವಜನಿಕರು ಲಸಿಕೆಯ ಕುರಿತು ಅಪಪ್ರಚಾರಕ್ಕೆ ಕಿವಿಗೊಡದೇ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆಯಲು ಮುಂದೆ ಬಂದಿರುವುದರಿಂದ ಸರ್ಕಾರದಿಂದ ಹೆಚ್ಚಿನ ಸಂಖ್ಯೆಯ ಲಸಿಕೆ ದೊರೆಯಲಿದೆ. ಕೋವಿಡ್ ಲಸಿಕೆ ಪಡೆದ ಯಾವುದೇ ವ್ಯಕ್ತಿ ಕೋವಿಡ್ ಬಾಧಿಸಿದರೂ ಸಹ ಅದರ ತೀವ್ರತೆಗೆ ಒಳಗಾಗದೆ ಗುಣಮುಖರಾಗಿದ್ದಾರೆ. ಯಾರೂ ಸಹ ವೆಂಟಿಲೇಟರ್ ಪಡೆಯುವ ಮಟ್ಟಿಗೆ ಬಾಧಿತರಾಗದೇ ಔಷಧಗಳಿಂದಲೇ ಸಂಪೂರ್ಣ ಗುಣಮುಖರಾಗಿದ್ದಾರೆ. ಅದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಲಸಿಕೆ ಪಡೆದು ಇತರರನ್ನೂ ಲಸಿಕೆ ಪಡೆಯಲು ಪ್ರೇರೇಪಿಸುವಂತೆ ಶೋಭಾ ಕರಂದ್ಲಾಜೆ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ರಘುಪತಿ ಭಟ್ ಮಾತನಾಡಿ, ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ. ಲಸಿಕೆಯಿಂದ ಮಾತ್ರ ಪರಿಹಾರ ಸಾಧ್ಯ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆಯಬೇಕು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ 5.04% ಇದೆ. ಆದ್ದರಿಂದ ಜಿಲ್ಲೆಯನ್ನೂ ಸಹ ಸಂಪೂರ್ಣ ಅನ್‌ಲಾಕ್ ಮಾಡುವ ಕುರಿತಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ನಗರಸಭೆಯ ಸದಸ್ಯರು ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಸ್ವಾಗತಿಸಿದರು, ಲಸಿಕಾ ಉಸ್ತುವಾರಿ ಡಾ. ಎಂ.ಜಿ.ರಾಮ ವಂದಿಸಿದರು. ಸುಮಾರು 300 ಕ್ಕೂ ಅಧಿಕ ಮಂದಿಗೆ ಈ ಕೇಂದ್ರದಲ್ಲಿ ಲಸಿಕೆ ನೀಡಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!