Wednesday, March 25, 2026
Wednesday, March 25, 2026

ವಂದೇ ಭಾರತ್ ರೈಲು ಬೆಂಗಳೂರಿನಿಂದ ಮಂಗಳೂರು, ಉಡುಪಿ, ಉತ್ತರ ಕನ್ನಡದವರೆಗೆ ವಿಸ್ತರಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ

ವಂದೇ ಭಾರತ್ ರೈಲು ಬೆಂಗಳೂರಿನಿಂದ ಮಂಗಳೂರು, ಉಡುಪಿ, ಉತ್ತರ ಕನ್ನಡದವರೆಗೆ ವಿಸ್ತರಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ

Date:

ನವದೆಹಲಿ, ಫೆ.4: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ರವರನ್ನು ದೆಹಲಿಯ ಕಚೇರಿಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ಮಾಡಿ ವಂದೇ ಭಾರತ್ ರೈಲು ಬೆಂಗಳೂರಿನಿಂದ ಮಂಗಳೂರು, ಉಡುಪಿ, ಉತ್ತರ ಕನ್ನಡದವರೆಗೆ ವಿಸ್ತರಿಸಬೇಕಾದ ಅಗತ್ಯವನ್ನು ವಿವರಿಸಿದರು. ಪ್ರತಿ ದಿನ ಉತ್ತರ ಕನ್ನಡ, ಕುಂದಾಪುರ, ಉಡುಪಿ, ಮಂಗಳೂರಿನಿಂದ 600 ಕ್ಕೂ ಹೆಚ್ಚು ಬಸ್ ಗಳು ಮತ್ತು ಇತರ ಖಾಸಗಿ ವಾಹನಗಳು ರಾಜಧಾನಿ ಬೆಂಗಳೂರು ತಲುಪುತ್ತಿದ್ದು, ನಿತ್ಯ ಪ್ರಯಾಣಿಕರಿಗೆ ಅನುಕೂಲವಾಗಲು ಕರಾವಳಿಗೆ ವಂದೇ ಭಾರತ್ ರೈಲು ಬಿಡುಗಡೆ ಮಾಡಬೇಕೆಂದು ಸಂಸದರು ವಿನಂತಿಸಿದರು.

ಮಂಗಳೂರಿನಿಂದ ಮುಂಬೈವರೆಗಿನ ಕೊಂಕಣ ರೈಲ್ವೆಯ 734 ಕಿ.ಮೀ ಹಳಿಗಳನ್ನು ದ್ವಿಪಥಗೊಳಿಸುವ ಮೂಲಕ ಹೆಚ್ಚುವರಿ ರೈಲ್ವೆ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಕೂಡಲೇ ಸರ್ವೆ ನಡೆಸಿ ಹಣ ಬಿಡುಗಡೆ ಮಾಡಬೇಕು. ಹಲವು ವರ್ಷಗಳಿಂದ ಮಂಗಳೂರಿನಿಂದ ಕಾರವಾರದವರೆಗಿನ ಕರಾವಳಿ ಜಿಲ್ಲೆಗಳ ರೈಲ್ವೆ ಪ್ರಯಾಣಿಕರಿಗೆ ಉತ್ತಮ ಸೇವೆಯ ಕೊರತೆ ಇದ್ದು, ಇದೀಗ ನರೇಂದ್ರ ಮೋದಿಯವರ ಸರಕಾರದ ತುರ್ತು ಕ್ರಮಗಳಿಂದಾಗಿ ಸಾಕಷ್ಟು ಪ್ರಗತಿ ಕಂಡು ಬರುತ್ತಿದ್ದು, ಇನ್ನೂ ಹೊಸ ರೈಲುಗಳ ಅಗತ್ಯವಿರುವುದರಿಂದ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ನೆರವು ನೀಡಬೇಕೆಂದು ರೈಲ್ವೆ ಸಚಿವರಲ್ಲಿ ಸಂಸದ ಕೋಟ ಮನವಿ ಮಾಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರ ದೇಶಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸರ್ಕಾರ ನಿರಂತರವಾಗಿ ಪ್ರಯತ್ನಗಳನ್ನು ಮಾಡಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಮಾ.24: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ರಾಜ್ಯಸಭೆಯಲ್ಲಿ ಮಂಗಳವಾರ...

ಇನ್ಸಿಡೆಂಟ್ 2026: ನಿಟ್ಟೆ ವಿದ್ಯಾರ್ಥಿಗಳಿಗೆ ಬಹುಮಾನ

ಕಾರ್ಕಳ, ಮಾ.24: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಆಯೋಜಿಸಿದ ವಾರ್ಷಿಕ...

ಆಸ್ಟ್ರೋ ಮೋಹನ್ ಅವರಿಗೆ ಅಂತರರಾಷ್ಟ್ರೀಯ ಗೌರವ

ಉಡುಪಿ, ಮಾ.23: ಅಂತರರಾಷ್ಟ್ರೀಯ ಖ್ಯಾತಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕರು ಹಾಗೂ ಕ್ಯಾನನ್ ಇಓಎಸ್...
error: Content is protected !!