ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 20 ರಿಂದ ನವೆಂಬರ್ 24 ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್ 20 ರಂದು 115.6 ರಿಂದ 204.4 ಮಿಮಿ ಮಳೆಯಾಗುವ ಸಾಧ್ಯತೆಗಳಿದ್ದು, ನವೆಂಬರ್ 21 ರಂದು 64.5 ರಿಂದ 115.5 ಮಿಮಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
