ಉಡುಪಿ: ಉಡುಪಿ ಜಿಲ್ಲೆಯಲ್ಲಿ 23 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-18, ಕುಂದಾಪುರ-2, ಕಾರ್ಕಳ-3 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 69 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75740 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 131 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 474 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಕ್ಟೋಬರ್ 1 ರಂದು 2945 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1140964 ಮಾದರಿಗಳನ್ನು ಪರೀಕ್ಷಿಸಲಾಗಿದೆ.