Sunday, January 19, 2025
Sunday, January 19, 2025

ರಸ್ತೆ ಅಪಘಾತ- ಮರಣಾನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

ರಸ್ತೆ ಅಪಘಾತ- ಮರಣಾನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

Date:

ಮಣಿಪಾಲ: ದಾವಣಗೆರೆ  ಬಳಿ ಗುಡಾಲು ಗ್ರಾಮದ ಗುಮ್ಮನೂರು ರಸ್ತೆಯಲ್ಲಿ  ಜ. 22ರಂದು ಸಂಜೆ 4 ಗಂಟೆಗೆ ರಸ್ತೆ ಅಪಘಾತ ಸಂಭವಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಜ. 23 ರಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಂಜುಂಡಪ್ಪ ಎಚ್ ಎನ್ ಇವರ ಪತ್ನಿಯಾದ ಇಂದ್ರಮ್ಮ  ಬಿ ಎಂ, 57  ವರ್ಷ ಅವರು ಅಪಘಾತದ ಪರಿಣಾಮದಿಂದ ತೀವ್ರತರವಾದ ಗಾಯವನ್ನು ಹೊಂದಿದ್ದರು.
 
ಕೆ.ಎಂ.ಸಿ ಆಸ್ಪತ್ರೆಯ ವೈದ್ಯರು ಇಂದ್ರಮ್ಮ ಅವರನ್ನು  ರಕ್ಷಿಸಲು ಪ್ರಯತ್ನಿಸಿದರೂ,  ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ. ಇಂದ್ರಮ್ಮ ಬಿ ಎಂ ಅವರನ್ನು 6 ಗಂಟೆಗಳ ಅಂತರದಲ್ಲಿ ಎರಡು ಬಾರಿ ಪರಿಶೀಲಿಸಿ, ಅಧಿಕೃತವಾಗಿ ವೈದ್ಯರು ರೋಗಿಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದರು.

ಮೊದಲನೆಯದು ಜ. 24 ರಂದು ಬೆಳಿಗ್ಗೆ 10.29 ಕ್ಕೆ ಮತ್ತು ಎರಡನೆಯದು ಸಂಜೆ 4.53 ಕ್ಕೆ.  1994ರ ಮಾನವ ಹಕ್ಕುಗಳ ಕಾಯಿದೆಯ 1994 ಪ್ರೋಟೋಕಾಲ್ಗಳು ಮತ್ತು  ಕಾರ್ಯವಿಧಾನಗಳ ಪ್ರಕಾರ ತರುವಾಯ ಇಂದ್ರಮ್ಮ ಬಿ ಎಂ ಅವರ ಪತಿ ನಂಜುಂಡಪ್ಪ ಹೆಚ್ ಎನ್ ಅವರು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು. ಹೃದಯ/ಹೃದಯ ಕವಾಟಗಳು, ಯಕೃತ್ತು, ಎರಡು ಮೂತ್ರಪಿಂಡಗಳು ಮತ್ತು ಎರಡು ಕಾರ್ನಿಯಾಗಳು/ಕಣ್ಣುಗುಡ್ಡೆಗಳನ್ನು ತೆಗೆದು 6 ಜನರ ಜೀವ ಉಳಿಸಲು ಸಹಾಯವಾಗಿದೆ.
 
ಜೀವನಸಾರ್ಥಕತೆ ಪ್ರೋಟೋಕಾಲ್ಗಳು ಮತ್ತು ನಿರ್ಧಾರಗಳ ಪ್ರಕಾರ, ನೋಂದಾಯಿತ ರೋಗಿಗಳಿಗೆ ಎರಡು ಕಾರ್ನಿಯಾಗಳು ಮತ್ತು ಒಂದು ಮೂತ್ರಪಿಂಡವನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರೋಗಿಗಳಿಗೆ ಬಳಸಲಾಯಿತು. ಒಂದು ಮೂತ್ರಪಿಂಡವನ್ನು ಮಂಗಳೂರಿನ ಯೆನೆಪೊಯ ಆಸ್ಪತ್ರೆಗೆ, ಹೃದಯ/ಹೃದಯ ಕವಾಟವನ್ನು ಚೆನ್ನೈ ಎಂಜಿಎಂ ಆಸ್ಪತ್ರೆಯ ರೋಗಿಗಳಿಗೆ ಕಳುಹಿಸಿಕೊಡಲಾಯಿತು.
 
ಮೃತ ಇಂದ್ರಮ್ಮ ಅವರ ಪತಿಯಾದ ನಂಜುಂಡಪ್ಪ ಅವರು “ಅಂಗದಾನ ಒಂದು ಪುಣ್ಯದ ಕೆಲಸ. ನನ್ನ ಪತ್ನಿ ಅಂಗದಾನ ಮಾಡಿ ತನ್ನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ ಎಂದು ತಿಳಿಸಿದ್ದಾರೆ.  

ಜೀವ ಉಳಿಸುವ ನಿಟ್ಟಿನಲ್ಲಿ ಅಂಗದಾನ ಶ್ರೇಷ್ಟವಾದ ಕೆಲಸವಾಗಿದ್ದು, ಅತ್ಯಂತ ಮಹತ್ವವನ್ನು ಪಡೆದಿದೆ. ಜನರು ಈ ರೀತಿಯ ಉತ್ತಮ ಕಾರ್ಯಗಳಿಗೆ ಪ್ರೋತ್ಸಾಹಿಸಬೇಕು ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ತಿಳಿಸಿ ಅಂಗ ದಾನ ಮಾಡಲು ನಿರ್ಧರಿಸಿದ ಇಂದ್ರಮ್ಮ ಕುಟುಂಬಕ್ಕೆ ಕ್ರತಜ್ಞತೆ ಸಲ್ಲಿಸಿದರು. ಮಾಧ್ಯಮಗಳು ಈ ವಿಷಯವನ್ನು ಜನರಿಗೆ ತಲುಪಿಸುವಲ್ಲಿ ಮಹತ್ತರ ಪಾತ್ರ ವಹಿಸಬೇಕು ಎಂದು ಅಭಿಪ್ರಾಯಪಟ್ಟರು.  

ದಾನ ಮಾಡಿದ ಅಂಗಗಳನ್ನು ಹಸಿರು ಪಥದಲ್ಲಿ (ಗ್ರೀನ್ ಕಾರಿಡಾರ್) ಮಣಿಪಾಲದಿಂದ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಉಡುಪಿಯ ಪೊಲೀಸ್ ಇಲಾಖೆಯವರ ಸಹಯೋಗದೊಂದಿಗೆ ಚೆನ್ನೈ ಗೆ ವರ್ಗಾಯಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!