Monday, October 12, 2026
Monday, October 12, 2026

ನಿಟ್ಟೂರು: ವಿದ್ಯಾಸೇತು ಪುಸ್ತಕ ವಿತರಣೆ

ನಿಟ್ಟೂರು: ವಿದ್ಯಾಸೇತು ಪುಸ್ತಕ ವಿತರಣೆ

Date:

ಉಡುಪಿ: ನಿಟ್ಟೂರು ಪ್ರೌಢಶಾಲೆಯ ಇಂಟರಾಕ್ಟ್ ಕ್ಲಬ್ ಪದಗ್ರಹಣ ಕಾರ್ಯಕ್ರಮ ನೆರವೇರಿಸಿದ ರೋಟರಿ ಅಧ್ಯಕ್ಷ ಹೇಮಂತ ಯು. ಕಾಂತ್ ಅವರು ಇಂಟರಾಕ್ಟ ಕ್ಲಬ್ ನ ಮೂಲಕ ನಡೆಸುವ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ ವ್ಯಕ್ತಿತ್ವವನ್ನು ವಿಕಸನಗೊಳಿಸಲು ಮುಂದಾಗಬೇಕೆಂದರು. ರೋಟರಿ ಜಿಲ್ಲಾ ಸಾಕ್ಷರತಾ ಸಮಿತಿಯ ಸಭಾಪತಿ ಸುಬ್ರಹ್ಮಣ್ಯ ಬಾಸ್ರಿ ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗೆ ಅವರ ಜ್ಞಾನಾಭಿವೃದ್ದಿಗೆ ಉಪಯುಕ್ತವಾದ ವಿದ್ಯಾಸೇತು ಪುಸ್ತಕವನ್ನು ವಿತರಿಸಿ ಇದರ ಸದುಪಯೋಗ ಪಡೆಯಬೇಕೆಂದರು.

ನಿಟ್ಟೂರು ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಮುರಳಿ ಕಡೆಕಾರ್ ಅವರು, ರೋಟರಿ ಉಡುಪಿ ನಿಟ್ಟೂರು ವಿದ್ಯಾಸಂಸ್ಥೆಗೆ ನೀಡಿದ ಕೊಡುಗೆಯನ್ನು ಸ್ಮರಿಸಿ ವಿದ್ಯಾರ್ಥಿಗಳು ಇಂಟರಾಕ್ಟ್ ಕ್ಲಬ್ ನ ಮ‌ೂಲಕ ತಮ್ಮ ಚಟುವಟಿಕೆಗಳನ್ನು ನಡೆಸಿ ಕ್ರಿಯಾಶೀಲರಾಗಬೇಕೆಂದು ಕರೆ ನೀಡಿದರು.

ಇಂಟರಾಕ್ಟ ಸಭಾಪತಿ ವನಿತಾ ಉಪಾಧ್ಯಾಯ, ಈ ವರ್ಷ ಇಂಟರಾಕ್ಟ ಕ್ಲಬ್ ಗಳು ನಡೆಸಬಹುದಾದ ಕಾರ್ಯಕ್ರಮಗಳ ಬಗ್ಗೆ ತಿಳಿಸಿ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಅನಸೂಯ ಅವರು ನೂತನ ತಂಡಕ್ಕೆ ಶುಭ ಹಾರೈಸಿದರು. ರೋಟರಿ ಕಾರ್ಯದರ್ಶಿ ಗೋಪಾಲಕೃಷ್ಣ ಪ್ರಭು, ರಾಮಚಂದ್ರ ಉಪಾಧ್ಯಾಯ, ಗುರುರಾಜ ಭಟ್ ಮುಂತಾದವರು ಉಪಸ್ಥಿತರಿದ್ದರು. ಕಾರ್ತಿಕ್ ಭಟ್ ಸ್ವಾಗತಿಸಿ, ಸಂಧ್ಯಾ ನಾಯ್ಕ್ ವಂದಿಸಿದರು. ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು, ಅ.11: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2026ರ ಮೈಸೂರು...

ತಮಿಳುನಾಡಿನಲ್ಲಿ 13,000 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ, ಅ.11: ಚೆನ್ನೈನ ಐಐಟಿ-ಮದ್ರಾಸ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ, ಪ್ರಧಾನಿ ನರೇಂದ್ರ...

ಕಾಪು ಶ್ರೀ ಹೊಸಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ

ಕಾಪು, ಅ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ...

ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ

ಮಣಿಪಾಲ, ಅ.11: ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನದ ಅಂಗವಾಗಿ...
error: Content is protected !!