Wednesday, January 22, 2025
Wednesday, January 22, 2025

ಮಣಿಪಾಲ ಕೆ.ಎಂ.ಸಿ ಆಸ್ಪತ್ರೆ: ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನ ಆಚರಣೆ

ಮಣಿಪಾಲ ಕೆ.ಎಂ.ಸಿ ಆಸ್ಪತ್ರೆ: ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನ ಆಚರಣೆ

Date:

ಮಣಿಪಾಲ: ರೋಗಿಗಳಿಗೆ ರಕ್ತ ಅಥವಾ ಅದರ ಘಟಕಗಳನ್ನು ದಾನ ಮಾಡುವುದು ಆಧುನಿಕ ಆರೋಗ್ಯ ವ್ಯವಸ್ಥೆಯಲ್ಲಿ ಮಾನವೀಯತೆಯ ಬಹುಮುಖ್ಯ ಭಾಗವಾಗಿದೆ. ಇದರ ಕುರಿತು ಜಾಗೃತಿ ಮೂಡಿಸಲು ಮತ್ತು ಸ್ವಯಂಪ್ರೇರಿತ ರಕ್ತದಾನವನ್ನು ಹೆಚ್ಚೆಚ್ಚು ಪ್ರಚುರಪಡಿಸಿ ಪ್ರೋತ್ಸಾಹಿಸಿ ಹೆಚ್ಚಿನ ಜನ ಇದರಲ್ಲಿ ಪಾಲ್ಗೊಳ್ಳುವಂತೆ ಮಾಡುವ ದೃಷ್ಟಿಯಿಂದ ಅದಕ್ಕೆ ಪೂರಕವಾದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರತಿ ವರ್ಷ ಅಕ್ಟೋಬರ್ 1 ರಂದು ಭಾರತದಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನವನ್ನಾಗಿ ಆಚರಿಸಲಾಗುತ್ತದೆ.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ರಕ್ತ ಕೇಂದ್ರವು ಇಂದು ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನವನ್ನು ಆಚರಿಸಿತು. ಇದಕ್ಕೆ ಪೂರಕವಾಗಿ ಶಿಬಿರಗಳಿಗೆ ಅಗತ್ಯ ಸಲಕರಣೆಗಳನ್ನು ಕೊಂಡೊಯ್ಯಲು ಮತ್ತು ಸಂಗ್ರಹಿಸಿದ ರಕ್ತವನ್ನು ಸರಿಯಾದ ರೀತಿಯಲ್ಲಿ ಕ್ಲಪ್ತ ಸಮಯದಲ್ಲಿ ರಕ್ತ ನಿಧಿಗೆ ತಲುಪಿಸಲು ತಯಾರುಗೊಳಿಸಿದ ಸುಸಜ್ಜಿತ ವಾಹನವನ್ನು ಲೋಕಾರ್ಪಣೆಗೊಳಿಸಲಾಯಿತು. ಈ ಸಂದರ್ಭದಲ್ಲಿ ರಕ್ತದಾನ ಶಿಬಿರಗಳನ್ನು ಏರ್ಪಡಿಸುತ್ತಿರುವ ಮತ್ತು ಇದರ ಮೂಲಕ ಸಾರ್ವಜನಿಕರಲ್ಲಿ ರಕ್ತದಾನ ಮಾಡಲು ಅರಿವು ಮೂಡಿಸುತ್ತಿರುವ ಸಂಘ ಸಂಸ್ಥೆಗಳನ್ನು ಅಭಿನಂದಿಸಲಾಯಿತು.

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ. ಶರತ್ ಕುಮಾರ್ ರಾವ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ, ರಕ್ತದಾನ ಮಾಡುವವರು ಯಾರು ಮತ್ತು ರಕ್ತ ಸ್ವೀಕರಿಸುವವರು ಯಾರು ಎಂಬುದು ಮುಖ್ಯವಲ್ಲ, ಭವಿಷ್ಯದಲ್ಲಿ ಯಾವಾಗಾದರೂ ರಕ್ತದಾನಿಯು ರಕ್ತ ಸ್ವೀಕರಿಸುವವರಾಗಬಹುದು ಅಥವಾ ರಕ್ತ ಪಡೆದವರು ಮುಂದಿನ ದಿನಗಳಲ್ಲಿ ಆರೋಗ್ಯವಂತ ದಾನಿಗಳಾಗಬಹುದು. ಅದಕ್ಕಾಗಿಯೇ ಯಾವುದೇ ಅಪೇಕ್ಷೆಯಿಲ್ಲದೆ ರಕ್ತದಾನ ಮಾಡುವುದು ಜೀವ ಉಳಿಸುವ ಪ್ರಕ್ರಿಯೆಯಲ್ಲಿ ಮಾನವೀಯತೆಯ ಒಂದು ಮಹತ್ವದ ಮತ್ತು ಪ್ರಮುಖ ಭಾಗವಾಗಿದೆ ಎಂದರು.

ಮಾಹೆ ಮಣಿಪಾಲ ಡೈರೆಕ್ಟರ್ ಜನರಲ್ ಸರ್ವೀಸಸ್ ಕರ್ನಲ್ ಪ್ರಕಾಶ್ ಚಂದ್ರ ಬಿ, ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮುಖ್ಯ ನಿರ್ವಹಣಾಧಿಕಾರಿ ಸಿ. ಜಿ. ಮುತ್ತಣ್ಣ ಕಾರ್ಯಕ್ರಮದ ಗೌರವ ಅತಿಥಿಗಳಾಗಿದ್ದರು. ಕರ್ನಲ್ ಪ್ರಕಾಶ್ ಚಂದ್ರ ಅವರು ರಕ್ತದಾನದ ಮಹತ್ವದ ಕುರಿತು ಮಾತನಾಡಿದರು ಮತ್ತು ಎಲ್ಲಾ ಸಂಘ ಸಂಸ್ಥೆಗಳು ರಕ್ತದಾನಕ್ಕಾಗಿ ಜನರನ್ನು ಪ್ರೇರೇಪಿಸಲು ಮುಂದಾಗಬೇಕು ಎಂದು ಹೇಳಿದರು.

ಕಳೆದ ಹಲವಾರು ವರ್ಷಗಳಿಂದ ರಕ್ತದಾನ ಶಿಬಿರಗಳ ಮೂಲಕ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯೊಂದಿಗೆ ಕೈಜೋಡಿಸಿರುವ ಬಿ.ಜೆ.ಪಿ. ಯುವ ಮೋರ್ಚಾ ಉಡುಪಿ ನಗರ, ಮೊಗವೀರ ಯುವ ಸಂಘಟನೆ (ರಿ.), ಉಡುಪಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ. ), ಉಡುಪಿ, ವಿಷ್ಣುಮೂರ್ತಿ ಸ್ನೇಹಿತರು (ರಿ.) ದೊಡ್ಡನಗುಡ್ಡೆ ಉಡುಪಿ, ಮಿಲಾಗ್ರೆಸ್ ಕಾಲೇಜು ಕಲ್ಯಾಣಪುರ, ಮಣಿಪಾಲ ಟೆಕ್ನಾಲಜೀಸ್ ಲಿಮಿಟೆಡ್ ಮಣಿಪಾಲ, ಕರಾವಳಿ ಯುವಕರು ಕ್ಲಬ್ ಉಡುಪಿ, ಹಿಂದೂ ಜಾಗರಣ ವೇದಿಕೆ ಉಡುಪಿ, ಶ್ರೀ ಮಧ್ವ ವಾದಿರಾಜ ತಂತ್ರಜ್ಞಾನ ಮತ್ತು ನಿರ್ವಹಣಾ ಸಂಸ್ಥೆ, ಬಂಟಕಲ್, ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು, ಮಹಾತ್ಮ ಗಾಂಧಿ ವೈದ್ಯಕೀಯ ಕಾಲೇಜು ಕುಂಜಿಬೆಟ್ಟು, ಉಡುಪಿ ಮತ್ತು ಉಡುಪಿ ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್ (ರಿ ), ಉಡುಪಿ ಇವರನ್ನು ಅಭಿನಂದಿಸಲಾಯಿತು.

ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಮಣಿಪಾಲ ಇಮ್ಯುನೊಹೆಮಾಟಾಲಜಿ ಮತ್ತು ರಕ್ತ ವರ್ಗಾವಣೆ ವಿಭಾಗದ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ ಡಾ. ಶಮೀ ಶಾಸ್ತ್ರಿ ಇವರು ಅಫೆರೆಸಿಸ್ ದಾನ ಮತ್ತು ಸ್ಟೆಮ್ ಸೆಲ್ ದಾನ ಸೇರಿದಂತೆ ವಿಶೇಷ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವನ್ನು ಉಲ್ಲೇಖಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ್ಞಾನಸುಧಾ: ಕಂಪೆನಿ ಸೆಕ್ರೇಟರಿ ಸಾಧಕರಿಗೆ ಸನ್ಮಾನ

ಕಾರ್ಕಳ, ಜ.22: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು...

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...
error: Content is protected !!