Tuesday, September 24, 2024
Tuesday, September 24, 2024

ಅಪರೂಪದ ಬಿಳಿ ಹೆಬ್ಬಾವು ಪತ್ತೆ- ಉರಗ ತಜ್ಣ ಪವನ್ ನಾಯ್ಕ ಅವರಿಂದ ರಕ್ಷಣೆ

ಅಪರೂಪದ ಬಿಳಿ ಹೆಬ್ಬಾವು ಪತ್ತೆ- ಉರಗ ತಜ್ಣ ಪವನ್ ನಾಯ್ಕ ಅವರಿಂದ ರಕ್ಷಣೆ

Date:

ಕುಮಟಾ: ತಾಲೂಕಿನ ಮಿರ್ಜಾನಿನ ರಾಮನಗರ ನಿವಾಸಿ ಸುಬ್ರಹ್ಮಣ್ಯ ನಾಯ್ಕ ಅವರ ಮನೆಯಲ್ಲಿ ಅಪರೂಪದ ಬಿಳಿ ಹಾವು ಪ್ರತ್ಯಕ್ಷಗೊಂಡು ಸಾರ್ವಜನಿಕರಲ್ಲಿ ಗೊಂದಲವುಂಟು ಮಾಡಿತು. ಅಷ್ಟರಲ್ಲಿ ವಿಷಯ ಉರಗ ತಜ್ಞ ಪವನ್ ಎಮ್ ನಾಯ್ಕ ಅವರಿಗೆ ತಿಳಿಸಿದ್ದು, ಸ್ಥಳಕ್ಕೆ ತೆರಳಿ ಈ ಬಿಳಿ ಹಾವು ಹೆಬ್ಬಾವು ಎಂದು ಖಾತ್ರಿಪಡಿಸುವುದರೊಂದಿಗೆ ಆತಂಕ ತಿಳಿಯಾಯಿತು.

ಬಿಳಿ ಹಾವು ಎಲ್ಲಿಂದ ಬಂತು?
ಅಷ್ಟಕ್ಕೂ ಈ ಬಿಳಿ ಹಾವು ಎಲ್ಲಿಂದ ಬಂತು ಎನ್ನುವುದರ ಬಗ್ಗೆ ಪವನ್ ನಾಯ್ಕ ಮಾಹಿತಿ ನೀಡಿದ್ದಾರೆ.

ಇಂತಹ ಹಾವುಗಳು ಬೇರೆಯ ಜಾತಿಯ ಹಾವಲ್ಲ. ಚರ್ಮಕ್ಕೆ ಬಣ್ಣ ನೀಡುವ ವರ್ಣ ದ್ರವ್ಯ ಗ್ರಂಥಿ ಅಂದರೆ ಮೆಲಾಲಿನ್ ಅಥವಾ ಪಿಗ್ಮೆಂಟ್ ನ ಕೊರತೆಯಿಂದ ಚರ್ಮಕ್ಕೆ ಬಣ್ಣ ಬರದೇ ಈ ರೀತಿ ಬಿಳಿ ಬಣ್ಣಕ್ಕೆ ಕಾರಣವಾಗುತ್ತದೆ. ಇದನ್ನ ಅಲ್ಬಿನೋ ಸ್ನೇಕ್ಸ್ ಎಂದು ಕೂಡಾ ಕರೆಯುತ್ತಾರೆ.

ಆದರೆ ಅಲ್ಬಿನೋ ಹಾವುಗಳಾದರೆ ಕಣ್ಣು ಕೂಡ ಕೆಂಪು ಮಿಶ್ರಿತ ಬಿಳಿ ಬಣ್ಣ ಇರಬೇಕಾಗುತ್ತದೆ‌. ಇದರ ಕಣ್ಣು ಅರ್ಧ ಮಾತ್ರ ಬಿಳಿ ಇದ್ದು ಇನ್ನರ್ಧ ಕಪ್ಪಿರೋ ಕಾರಣ ಇದನ್ನ ಅಲ್ಬಿನೋ ಹಾವಿನ ಗುಂಪಿಗೆ ಸೇರಿಲು ಸಾಧ್ಯವಿಲ್ಲ.

ಆದರೂ ಇದು ಕರ್ನಾಟಕದಲ್ಲಿ ಸಿಕ್ಕಿರೋ 2 ನೇ ದಾಖಲೆ ಹಾಗೂ ಹಾವನ್ನು ಸುರಕ್ಷಿತ ಜಾಗಕ್ಕೆ ಬಿಡಲಾಗಿದೆ ಎಂದು ಪವನ್ ನಾಯ್ಕ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಎಸ್.ಎಸ್. ಶಿಬಿರ

ಉಡುಪಿ, ಸೆ.23: ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ತಂಡ, ಕಸ್ತೂರ್ಬಾ ಮೆಡಿಕಲ್...

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ, ಸೆ.23: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್), ಬೆಂಗಳೂರು ಇವರ ವತಿಯಿಂದ...

ಸೆ. 26: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.23: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಸೆ.23: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ...
error: Content is protected !!