Wednesday, January 22, 2025
Wednesday, January 22, 2025

ತೆಂಕನಿಡಿಯೂರು: ಅಂತರಾಷ್ಟ್ರ‍ೀಯ ಮಹಿಳಾ ದಿನಾಚರಣೆ

ತೆಂಕನಿಡಿಯೂರು: ಅಂತರಾಷ್ಟ್ರ‍ೀಯ ಮಹಿಳಾ ದಿನಾಚರಣೆ

Date:

ಉಡುಪಿ: ಮಹಿಳಾ ಸಬಲೀಕರಣದಲ್ಲಿ ಶಿಕ್ಷಣದ ಪಾತ್ರ ಮಹತ್ವದಾಗಿದೆ. ಅದು ಮಹಿಳೆಯ ಮನೋಬಲವನ್ನು ಸದೃಢಗೊಳಿಸುತ್ತದೆ. ಮಹಿಳೆಯ ಹಕ್ಕುಗಳ ಬಗ್ಗೆ ಅರಿವು ಮೂಡಿಸುತ್ತದೆ. ಈ ಹಿನ್ನೆಲೆಯಲ್ಲಿ ಮಹಿಳಾ ಶಿಕ್ಷಣದ ಬಗ್ಗೆ ಹೆಚ್ಚಿನ ಗಮನ ಕೊಡುವ ಅಗತ್ಯವಿದೆ ಎಂದು ಡಾ. ಎ.ವಿ. ಬಾಳಿಗಾ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಸೌಜನ್ಯ ಶೆಟ್ಟಿ ಹೇಳಿದರು.

ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ನಡೆದ ಅಂತರಾಷ್ಟ್ರ‍ೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.

ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ವಹಿಸಿದ್ದರು. ಆಪ್ತ ಸಲಹಾ ಸಮಿತಿಯ ಸ್ನಾತಕೋತ್ತರ ವಿಭಾಗದ ಸಂಚಾಲಕರಾದ ಶರ್ಮಿಳಾ ಹಾರಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿ ಮಹಿಳಾ ದಿನಾಚರಣೆಯ ಮಹತ್ವವನ್ನು ವಿವರಿಸಿದರು.

ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುರೇಶ್ ರೈ ಕೆ. ಹಾಗೂ ಮಹಿಳಾ ಘಟಕದ ಸ್ನಾತಕೋತ್ತರ ವಿಭಾಗದ ಸಂಚಾಲಕರಾದ ಡಾ. ಸುನೀತಾ ವಿ. ಉಪಸ್ಥಿತರಿದ್ದರು. ಆಪ್ತ ಸಲಹಾ ಸಮಿತಿಯ ಪದವಿ ವಿಭಾಗದ ಸಂಚಾಲಕರಾದ ರತ್ನಮಾಲಾ ಸ್ವಾಗತಿಸಿದರು. ಮಹಿಳಾ ಘಟಕದ ಸಂಚಾಲಕರಾದ ಡಾ. ಸುಜಾತ ವಿ. ಶೇಟ್ ವಂದಿಸಿದರು. ಇಂಗ್ಲೀಷ್ ವಿಭಾಗದ ವಿದ್ಯಾರ್ಥಿನಿ ದರ್ಶಿನಿ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!