Tuesday, January 21, 2025
Tuesday, January 21, 2025

ಕಸ್ತೂರ್ಬಾ ಆಸ್ಪತ್ರೆ- ವಿಶಿಷ್ಟ ರೀತಿಯಲ್ಲಿ ಮಹಿಳಾ ದಿನಾಚರಣೆ

ಕಸ್ತೂರ್ಬಾ ಆಸ್ಪತ್ರೆ- ವಿಶಿಷ್ಟ ರೀತಿಯಲ್ಲಿ ಮಹಿಳಾ ದಿನಾಚರಣೆ

Date:

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಹಿಳಾ ದಿನವನ್ನು ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು. ಮಹಿಳಾ ಉದ್ಯೋಗಿಗಳು ಮನೆಯಲ್ಲಿಯೇ ತಯಾರಿಸಿದ ವಸ್ತುಗಳು ಮತ್ತು ಆಹಾರ ಪದಾರ್ಥಗಳ  ಪ್ರದರ್ಶನ ಮತ್ತು ಮಾರಾಟ ಮಾಡುವುದರ ಮೂಲಕ ಮಹಿಳೆಯರಲ್ಲಿ ಉದ್ಯಮಶೀಲತೆಯ ಮನೋಭಾವವನ್ನು ಕಲ್ಪಿಸಲು ಕಾರ್ಯಕ್ರಮ ಸಾಕ್ಷಿಯಾಯಿತು. ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆ ಮತ್ತು ಕಾರ್ಕಳದ ಡಾ.  ಟಿಎಂಎ ಪೈ ರೋಟರಿ ಆಸ್ಪತ್ರೆಯ 150ಕ್ಕೂ ಹೆಚ್ಚು ಮಹಿಳಾ ಉದ್ಯೋಗಿಗಳು 37 ಮಳಿಗೆಗಳೊಂದಿಗೆ ಭಾಗವಹಿಸಿದ್ದರು.

ಅಪರ್ಣಾ ಮುತ್ತಣ್ಣ – ಫ್ಯಾಬ್ರಿಕ್ ಕೊಲಾಜ್ ಕಲಾವಿದೆ, ಡಾ. ಶಶಿಕಿಕಲಾ ಕೆ ಭಟ್- ಮುಖ್ಯಸ್ಥರು ಪ್ರಸೂತಿ ಮತ್ತು ಸ್ತ್ರೀ ರೋಗ ವಿಭಾಗ, ಡಾ. ಟಿಎಂಎ ಪೈ ಆಸ್ಪತ್ರೆ, ಉಡುಪಿ. ಡಾ. ಅನಘಾ ಕೆ ಬಲ್ಲಾಳ್- ಅಧ್ಯಾಪಕರು ಕ್ಲಿನಿಕಲ್ ಸೈಕಾಲಜಿ ವಿಭಾಗ, ಮತ್ತು ಉದ್ಯಮಿ ಪ್ರಸನ್ನ ಪದ್ಮರಾಜ್ ಜಂಟಿಯಾಗಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ  ಮಾತನಾಡಿದ ಅಪರ್ಣಾ ಮುತ್ತಣ್ಣ  ಅವರು, ಮಹಿಳೆಯರ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಸಾಧನೆಗಳನ್ನು ಸ್ಮರಿಸಲು ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಮಹಿಳೆಯರು ಇಂದು ಏನನ್ನಾದರೂ ಸಾಧಿಸಬಹುದು ಮತ್ತು ಈ ವರ್ಷದ ದ್ಯೇಯ ವಾಕ್ಯ ಹೇಳುವಂತೆ ನಾವು ಲಿಂಗ ಪಕ್ಷಪಾತವನ್ನು ಮುರಿಯಬೇಕು ಎಂದು ಹೇಳಿದರು.

ಡಾ. ಶಶಿಕಲಾ ಭಟ್ ಮಾತನಾಡಿ, ಜನರ ಮನಸ್ಥಿತಿಯಲ್ಲಿ ದೊಡ್ಡ ಬದಲಾವಣೆಯನ್ನು ಕಂಡಿದ್ದೇನೆ, ಇಂದಿನ ದಿನಗಳಲ್ಲಿ ಹೆಣ್ಣು ಮಗು ಜನಿಸಿದರೆ ಕುಟುಂಬದ ಎಲ್ಲರೂ ಖುಷಿ ಪಡುತ್ತಾರೆ, ಆದರೆ 25 ವರ್ಷಗಳ ಹಿಂದೆ ತಂದೆ-ತಾಯಿ, ಕುಟುಂಬದವರು ಬೇರೆ ರೀತಿಯಲ್ಲಿ ಯೋಚಿಸುತ್ತಿದ್ದರು. ಆದ್ದರಿಂದ ರಾಷ್ಟ್ರೀಯ ಲಿಂಗ ಅನುಪಾತಕ್ಕಿಂತ ಉಡುಪಿ ಜಿಲ್ಲೆ ಅತಿ ಹೆಚ್ಚು ಮಹಿಳಾ ಅನುಪಾತವನ್ನು ಹೊಂದಿದೆ ಎಂದರು.

ಮಳಿಗೆಯಲ್ಲಿ ಮನೆಯಲ್ಲಿ ತಾವೇ ತಯಾರಿಸಿದ, ಪೇಂಟಿಂಗ್‌ಗಳು, ಫ್ಯಾಷನ್ ಆಭರಣಗಳು ಮತ್ತು ವೈವಿಧ್ಯಮಯ ಆಹಾರ ಪದಾರ್ಥಗಳ ಪ್ರದರ್ಶನ ಮತ್ತು ಮಾರಾಟವು ಇತ್ತು. ಮಹಿಳೆಯರಿಗಾಗಿ ಮೆಹಂದಿ ಸ್ಪರ್ಧೆಯೂ ನಡೆಯಿತು. ರಕ್ತದಾನ ಶಿಬಿರವನ್ನು ಸಹ ಆಯೋಜಿಸಲಾಗಿದ್ದು, ಕಸ್ತೂರ್ಬಾ  ಆಸ್ಪತ್ರೆಯ ರಕ್ತನಿಧಿಗಾಗಿ ಅನೇಕ ಮಹಿಳಾ ಉದ್ಯೋಗಿಗಳು ಮುಂದೆ ಬಂದು ರಕ್ತದಾನ ಮಾಡಿದರು. ಜುಂಬಾ ಕಾರ್ಯಕ್ರಮದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!