Sunday, January 19, 2025
Sunday, January 19, 2025

ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳಿಗೆ ಕಾರ್ಯಗಾರ

ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳಿಗೆ ಕಾರ್ಯಗಾರ

Date:

ಮಣಿಪಾಲ: ಪಡಿ ಸಂಸ್ಥೆ ಮಂಗಳೂರು ಮತ್ತು 80 ಬಡಗುಬೆಟ್ಟು ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ’ಮಕ್ಕಳ ಶಿಕ್ಷಣ, ಆರೋಗ್ಯ ಮತ್ತಯ ರಕ್ಷಣೆಯಲ್ಲಿ ಸ್ಥಳೀಯ ಸರಕಾರದ ಜವಾಬ್ದಾರಿಗಳು’ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳಿಗೆ ತರಬೇತಿ ಕಾರ್ಯಗಾರ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಆಶಯ ಗೀತೆಯೊಂದಿಗೆ ಪ್ರಾರಂಭಿಸಲಾಯಿತು.

ಈಗಾಗಲೇ ಒಂದನೇ ಹಂತದ ತರಬೇತಿ ಮತ್ತು ಮೌಲ್ಯಮಾಪನ ಮುಗಿಸಿದ್ದು, 80ಬಡಗುಬೆಟ್ಟು ಗ್ರಾಮ ಪಂಚಾಯತ್ ಮಕ್ಕಳ ಶಿಕ್ಷಣ ಮತ್ತು ಆರೋಗ್ಯ ವಿಚಾರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಒಂದು ತರಬೇತಿಯ ಮುಖ್ಯ ಉದ್ದೇಶ, ಸ್ಥಳೀಯ ಸರಕಾರವು ಮಕ್ಕಳ ಶಿಕ್ಷಣ ಮತ್ತು ರಕ್ಷಣೆಗೆ ಸಂಬಂಧಪಟ್ಟ ಸರಕಾರದ ಸುತ್ತೋಲೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನವಾಗುವಂತೆ ಮಾಡುವುದು. ಕೋವಿಡ್-19ರಿಂದ ಮಕ್ಕಳಿಗೆ ಸೋಂಕು ಹರಡದಂತೆ ಮತ್ತು ಮಕ್ಕಳ ಶಿಕ್ಷಣ, ರಕ್ಷಣೆ, ಹಾಗು ಆರೋಗ್ಯಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸುವಂತೆ ಮಾಡುವುದು ಎಂದು ಪಡಿ ಸಂಸ್ಥೆಯ ಉಡುಪಿ ಜಿಲ್ಲಾ ಸಂಯೋಜಕ ವಿವೇಕ್ ಹೇಳಿದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್ ಇವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ರಕ್ಷಣೆಯಲ್ಲಿ ಗ್ರಾಮ ಪಂಚಾಯತ್ ಪಾತ್ರ ಬಹಳಷ್ಟಿದೆ. ಈಗಾಗಲೇ 80 ಬಡಗುಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಲಾಗಿದೆ. ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಸಮಿತಿ ಈಗಾಗಲೇ ರಚಿಸಲಾಗಿದ್ದು ಸಭೆ ನಡೆಸುವುದರ ಬಗ್ಗೆ ಕ್ರಮ ವಹಿಸಲಾಗಿದೆ. ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಧವಿ ಎಸ್ ಆಚಾರ್ಯ ಇವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ರಕ್ಷಣೆಗೆ ಸಂಬಂಧಿಸಿದ ಈ ತರಬೇತಿ ತುಂಬಾ ಅಗತ್ಯವಿದೆ. ಶಿಕ್ಷಣ ಹಕ್ಕು ಕಾಯಿದೆ- 2009ರ ಸಮರ್ಪಕವಾಗಿ ಅನುಷ್ಠಾನ ಮಾಡುವುದು ನಮ್ಮೆಲ್ಲರ ಕರ್ತವ್ಯ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರತಿ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದರು.

ಸಂಪನ್ಮೂಲ ವ್ಯಕ್ತಿಗಳಾದ ಎಚ್ ಜಯವಂತ ರಾವ್ ಇವರು ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರಿಗೆ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ರಕ್ಷಣೆಯಲ್ಲಿ ಸ್ಥಳೀಯ ಸರಕಾರದ ಜವಾಬ್ದಾರಿಗಳು, ಈ ವಿಷಯವಾಗಿ ತರಬೇತಿ ನೀಡಿದರು. ಮೊದಲ ಅಧಿವೇಶನದಲ್ಲಿ ಹಿಂದಿನ ತರಬೇತಿಯ ಬಗ್ಗೆ ಪುನರ್ ಮನನ ಮಾಡಲಾಯಿತು.

ಎರಡನೇ ಅಧಿವೇಶನದಲ್ಲಿ ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಕಾವಲು ಸಮಿತಿ, ಗ್ರಾಮ ಪಂಚಾಯತ್ ಶಿಕ್ಷಣ ಕಾರ್ಯಪಡೆ, ಕೆ.ಡಿ.ಪಿ ಸಭೆಯ ಕುರಿತು ಗುಂಪು ಚರ್ಚೆ ನಡೆಸಿದರು ಮತ್ತು ಮೂರನೇ ಅಧಿವೇಶನದಲ್ಲಿ ಕೊರೋನ ಮುಕ್ತ ಸಮಾಜದಲ್ಲಿ ಮಕ್ಕಳು ಮತ್ತು ಸ್ಥಳೀಯ ಸರಕಾರದ ಜವಾಬ್ದಾರಿಗಳು ಇದರ ಕುರಿತು ಮೂರು ಗುಂಪು ಮಾಡಿ ಚರ್ಚಿಸಲಾಯಿತು. ಕೊನೆಯಲ್ಲಿ ತರಬೇತಿಯ ಆಧಾರದ ಮೇಲೆ ಕ್ರಿಯಾ ಯೋಜನೆ ತಯಾರಿಸಲಾಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನಿರುಪಮಾ ಎಸ್ ಹೆಗ್ಡೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಅಶೋಕ್ ಕುಮಾರ್, ಕಾರ್ಯದರ್ಶಿ ಶಕುಂತಲಾ, ಶಿಕ್ಷಣ ಸಂಪನ್ಮೂಲ ಕೇಂದ್ರ ಉಡುಪಿ ಕಾರ್ಯದರ್ಶಿ ಬಾಲಕೃಷ್ಣ ಪೂಜಾರಿ, ಜೊತೆ ಕಾರ್ಯದರ್ಶಿ ವಾಸು ಆಚಾರ್, ಗ್ರಾಮ ಪಂಚಾಯತ್ ಸರ್ವ ವಸದಸ್ಯರು, ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ‌ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಎಸ್.ಡಿ.ಎಮ್.ಸಿ ಸದಸ್ಯರು, ಪಡಿ ಸಂಸ್ಥೆ ಮಂಗಳೂರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು, ವೈದ್ಯಕೀಯ ಸಿಬ್ಬಂದಿ ವರ್ಗದವರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಎ.ಎನ್ ಎಮ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!