Sunday, January 19, 2025
Sunday, January 19, 2025

ಬಿಸಿಎ- ಉದ್ಯೋಗ ಅವಕಾಶಗಳು

ಬಿಸಿಎ- ಉದ್ಯೋಗ ಅವಕಾಶಗಳು

Date:

ಪುತ್ತೂರು: ವಿದ್ಯಾರ್ಥಿಗಳು ಒಳ್ಳೆಯ ಉದ್ಯೋಗವನ್ನು ಪಡೆಯಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ತಮ್ಮ ಆಂತರಿಕ ಶೈಕ್ಷ ಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬೇಕಾದದು ಇಂದು ಅನಿವಾರ್ಯವಾಗಿದೆ. ಇದಕ್ಕೆ ವಿದ್ಯಾರ್ಥಿಗಳು ಪೂರ್ವ ತಯಾರಿಯನ್ನು ಮಾಡುವುದರ ಜೊತೆಗೆ, ಸರಿಯಾದ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನವನ್ನು ಪಡೆದು ನಿರ್ದಿಷ್ಟ ಗುರಿ ಮತ್ತು ಧ್ಯೇಯವನ್ನು ತಲುಪಲು ಮೂಲಭೂತ ಸೌಕರ್ಯಗಳನ್ನು ಸದ್ಬಳಕೆ ಮಾಡಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿದೆಸೆಯಿಂದಲೇ ರೂಢಿಸಿಕೊಳ್ಳಬೇಕೆಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಹೇಳಿದರು.

ಪುತ್ತೂರು ವಿವೇಕಾನಂದ ಕಾಲೇಜಿನ ಗಣಕವಿಜ್ಞಾನ ವಿಭಾಗ ಮತ್ತು ಐಟಿ ಕ್ಲಬ್‌ನ ಜಂಟಿ ಸಹಯೋಗದಲ್ಲಿ ಹೊಸದಾಗಿ ಸೇರ್ಪಡೆಯಾದ ಬಿಸಿಎ ವಿದ್ಯಾರ್ಥಿಗಳಿಗೆ ದೊರಕಬಹುದಾದ ಉದ್ಯೋಗಗಳು ಮತ್ತು ಅವಕಾಶಗಳ ಬಗ್ಗೆ ಒಂದು ದಿನದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರಕಾಶ್‌ ಕುಮಾರ್, ಬೋಧಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಧ್ಯಾಪಕ ವಿಕ್ರಾಂತ್ ಕೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!